ಬೆಂಗಳೂರುಭಾರತದ ಪ್ರಮುಖ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಪ್ಯಾರಿಸ್-2024ರ ಒಲಿಂಪಿಕ್ಸ್‌ಗಾಗಿ ಭಾರತೀಯ ತಂಡದ ಶೇ.21 ಕ್ರೀಡಾಪಟುಗಳು ಎಲ್‌ಪಿಯು ವಿದ್ಯಾರ್ಥಿಗಳಾಗಿದ್ದಾರೆ.
ವಿಶ್ವವಿದ್ಯಾನಿಲಯದ 24 ವಿದ್ಯಾರ್ಥಿಗಳು ಜಾಗತಿಕ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಪ್ರತಿಷ್ಠಿತ ಅವಕಾಶವನ್ನು ಗಳಿಸಿದ್ದಾರೆ. ಕ್ರೀಡೆ ಮತ್ತು ಶಿಕ್ಷಣದಲ್ಲಿ ಶ್ರೇಷ್ಠತೆಗೆ ವಿಶ್ವವಿದ್ಯಾನಿಲಯದ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಜಾವೆಲಿನ್, ಕುಸ್ತಿ, ಹಾಕಿ, ಅಥ್ಲೆಟಿಕ್ಸ್, ವೇಟ್‌ಲಿಫ್ಟಿಂಗ್, ಶೂಟಿಂಗ್, ಬಾಕ್ಸಿಂಗ್ ಸೇರಿ ವಿವಿಧ ಕ್ರೀಡಾ ವಿಭಾಗಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.
ಪುರುಷರ ಜಾವೆಲಿನ್ ಎಸೆತದಲ್ಲಿ ನೀರಜ್ ಚೋಪ್ರಾ (ಬಿಎ), ಮಹಿಳೆಯರ 49 ಕೆಜಿ ವಿಭಾಗದಲ್ಲಿ ತಾರಾ ವೇಟ್‌ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು (ಎಂ.ಎ. ಮನಃಶಾಸ), ಭಾರತೀಯ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್, ಹಾರ್ದಿಕ್ ಸಿಂಗ್, ಶಮಹರ್ ಸಿಂಗ್, ಮನ್‌ದೀಪ್ ಸಿಂಗ್, ಸುಖ್‌ಜಿತ್ ಸಿಂಗ್ (ಎಲ್ಲರೂ ಬಿಎ ಓದುತ್ತಿದ್ದಾರೆ), ಮನ್‌ಪ್ರೀತ್ ಸಿಂಗ್, ಗುರ್ಜಂತ್ (ಎಂಬಿಎ), ಮತ್ತು ಜನ್ನನ್ ಪ್ರೀತ್ ಸಿಂಗ್.
ಈ ಕುರಿತು ಸಂತಸ ವ್ಯಕ್ತಪಡಿಸಿರುವ ರಾಜ್ಯಸಭಾ ಸದಸ್ಯರಾಗಿರುವ ಎಲ್‌ಪಿಯು ಸಂಸ್ಥಾಪಕ ಕುಲಾಧಿಪತಿ ಡಾ. ಅಶೋಕ್ ಕುಮಾರ್ ಮಿತ್ತಲ್, ಒಲಿಂಪಿಕ್ಸ್ ಭಾರತೀಯ ತಂಡದಲ್ಲಿ ಭಾಗವಹಿಸಿರುವ ನಮ್ಮ ಎಲ್ಲ ವಿದ್ಯಾರ್ಥಿಗಳನ್ನು ಅಭಿನಂದಿಸುತ್ತೇನೆ. ಯಾವುದೇ ವಿಶ್ವವಿದ್ಯಾನಿಲಯಕ್ಕೆ, ಒಬ್ಬ ವಿದ್ಯಾರ್ಥಿಯು ಭಾರತವನ್ನು ಒಲಿಂಪಿಕ್ಸ್‌ನಲ್ಲಿ ಪ್ರತಿನಿಧಿಸುವುದು ಗಮನಾರ್ಹ ಸಾಧನೆಯಾಗಿದೆ. ಆದರೆ, 24 ವಿದ್ಯಾರ್ಥಿಗಳನ್ನು ಹೊಂದುವುದು ನಮಗೆ ತುಂಬಾ ಹೆಮ್ಮೆಯ ವಿಷಯವಾಗಿದೆ ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − four =
Remember me
