ಬೆಂಗಳೂರು:ರಾಜ್ಯದ ಎಲ್ಲ ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆ.
ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿ ಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.
ರಾಜ್ಯ ಸರ್ಕಾರ ‘ಗೃಹ ಜ್ಯೋತಿ ಯೋಜನೆಯಡಿ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ಒದಗಿಸುತ್ತಿರುವ ರೀತಿಯಲ್ಲಿಯೇ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ ಸಹ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲು ಆದೇಶ ಹೊರಡಿಸಿದೆ. ಈ ಯೋಜನೆ ಪ್ರಯೋಜನ ಪಡೆಯಲು ಹಾಗೂ ಯೋಜನೆಯನ್ನು ಯಶಸ್ವಿಯಾಗಿ ಅಸುಷ್ಠಾನಗೊಳಿಸಲು ಶಾಲೆಗಳ ಮುಖ್ಯೋಪಾಧ್ಯಾಯರು ತಮ್ಮ ಶಾಲೆ ವ್ಯಾಪ್ತಿಗೆ ಒಳಪಡುವ ವಿದ್ಯುತ್ ಸರಬರಾಜು ಕಂಪನಿಗಳ ಉಪ ವಿಭಾಗ / ಶಾಖಾ ಕಚೇರಿಯಲ್ಲಿ ಶಾಲೆಯ ವಿದ್ಯುತ್ ಸ್ಥಾವರಗಳ ಮಾಹಿತಿಯನ್ನು ಜು.31,2024ರ ಒಳಗಾಗಿ ನೋಂದಣಿ ಮಾಡಿಸುವಂತೆ ಸೂಚಿಸಿದೆ.
ಸರ್ಕಾರಿ ಶಾಲೆಗಳಲ್ಲಿ ಉಳಿಕೆಯಾಗುವ ನಿರ್ವಹಣಾ ಅನುದಾನದಿಂದ ಶಾಲೆಗಳ ಗುಣಮಟ್ಟ ಅಭಿವೃದ್ಧಿವಡಿಸಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಹಾಗೂ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡುವಂತೆ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಿಸಿದೆ.
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:2 + eighteen =
Remember me
