

ಮಂಗಳೂರು:ಮಂಗಳೂರಿನಲ್ಲಿ ಸುಮಾರು 25 ವರ್ಷ ಹಿಂದೆ ಅಂಬಾಸಿಡರ್ ಕಾರು ಕಳವು ಪ್ರಕರಣದಲ್ಲಿ ತಲೆಮರೆಸಿದ್ದ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಪಿರಿಯಾಪಟ್ಟಣದ ಆರೆನಹಳ್ಳಿ ನಿವಾಸಿ ಅಸ್ಲಾಂ ಯಾನೆ ಅಸ್ಲಾಂ ಪಾಷಾ ಬಂಧಿತ ಆರೋಪಿ. ಈತನ ವಿರುದ್ಧ 1997ರಲ್ಲಿ ಅಂಬಾಸಿಡರ್ ಕಾರು ಕಳವಿಗೆ ಸಂಬಂಧಿಸಿ ಮಂಗಳೂರು ದಕ್ಷಿಣ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಆರೋಪಿ ಅಸ್ಲಾಂ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಆದರೆ ಆರೋಪಿ ಅಸ್ಲಾಂ 2000 ಇಸ್ವಿಯಿಂದ ನ್ಯಾಯಾಲಯಕ್ಕೆ ಗೈರಾಗಿದ್ದು, 2015ರಲ್ಲಿ ಆರೋಪಿಯ ಪತ್ತೆಗೆ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಆರೋಪಿ ತನ್ನ ವಿಳಾಸವನ್ನು ಪೀಣ್ಯ, ಬೆಂಗಳೂರು ಎಂದು ನೀಡಿರುವುದರಿಂದ ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು. ಕೊನೆಗೂ ಆರೋಪಿಯ ಮೂಲ ವಿಳಾಸ ಪತ್ತೆ ಮಾಡುವಲ್ಲಿ ಸಿಬ್ಬಂದಿ ಪುಟ್ಟರಾಮ ಮತ್ತು ರವಿ ಕುಮಾರ್ ಯಶಸ್ವಿಯಾಗಿದ್ದು, ಆತನನ್ನು ಬಂಧಿಸಿ ಕರೆತಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 5 =
Remember me
