
ಬೆಂಗಳೂರು:ರಾಜ್ಯ ಸರ್ಕಾರದ ವರ್ಗಾವಣೆ ದಂಧೆ, ಭ್ರಷ್ಟಾಚಾರ, ಕಮೀಷನ್ ಸಂಗ್ರಹದ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಗುರುತರ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ವಿದೇಶ ಪ್ರವಾಸದಿಂದ ಹಿಂದಿರುಗಿದ ತಕ್ಷಣ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗರೆದರು.
ಕಾಂಗ್ರೆಸ್‌ಈಸ್ಟ್ ಇಂಡಿಯಾ ಕಂಪನಿಯಂತೆ ರಾಜ್ಯವನ್ನು ಲೂಟಿ ಮಾಡುತ್ತಿದೆ. ಪೊಲೀಸ್ ವರ್ಗಾವಣೆಯಲ್ಲಿ ವೈಎಸ್‌ಟಿ ದಂಧೆಕೋರರು ಶಾಮೀಲಾಗಿದ್ದಾರೆ. ಬಿಡಿಎ ಅಧಿಕಾರಿಗಳಿಂದ 250 ಕೋಟಿ ರೂ. ಡಿಮ್ಯಾಂಡ್ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.ಬಿಡಿಎ ಅಧಿಕಾರಿಗಳಿಂದಲೂ ಹಣಕ್ಕೆ ಬೇಡಿಕೆ ಇಡಲಾಗಿದೆ. ದಿಲ್ಲಿಗೆ ಈ ಹಣ ಕಲಿಸಬೇಕು, ಕೊನೆಪಕ್ಷ 250 ಕೋಟಿ ರೂ. ಕಲೆಕ್ಷನ್ ಆಗಬೇಕು ಎಂದು ಅಧಿಕಾರಿಗಳಿಗೆ ಮಹಾನುಭಾವರೊಬ್ಬರು ತಾಕೀತು ಮಾಡುತ್ತಾರೆ. ದುಡ್ಡು ಯಾರಿಗೆ ಸೇರಬೇಕು ಅವರ ಪಟ್ಟಿ ಕೊಡುತ್ತೇವೆ, ಅವರಿಗೆ ನೇರವಾಗಿ ದುಡ್ಡು ತಲುಪಿಸಿ ಎಂದು ಹೇಳುತ್ತಾರಂತೆ. ನಾನು ಯುರೋಪ್‌ನಲ್ಲಿ ಇದ್ದಾಗಲೇ ಈ ಬಗ್ಗೆ ಮಾಹಿತಿ ಬಂತು ಎಂದು ಚಾಟಿ ಬೀಸಿದರು.
ನಾನು ಪ್ರವಾಸ ಹೋಗಿದ್ದು ಯುರೋಪ್ ದೇಶಗಳಿಗೆ. ಆದರೆ ಇಲ್ಲಿ ಕುಮಾರಸ್ವಾಮಿ ಸಿಂಗಾಪುರಕ್ಕೆ ಹೋಗಿ ಸರ್ಕಾರ ಕೆಡವಲು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ವದಂತಿ ಹಬ್ಬಿಸಿದರು. ಇದು ನಮ್ಮ ರಾಜ್ಯದ ಬೇಹುಗಾರಿಕೆ ಇಲಾಖೆ ಕೆಲಸ ಮಾಡುತ್ತಿರುವ ರೀತಿ ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಕುಮಾರಸ್ವಾಮಿ ಹಿಟ್ ಅಂಡ್ ರನ್ ಕೇಸುಕುಮಾರಸ್ವಾಮಿ ಟೀಕೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ಆರೋಪಗಳು ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪ ಮಾಡುತ್ತಾರೆ.ಹಿಂದೆ ಪೆನ್‌ಡ್ರೈವ್ ತೋರಿಸಿದ್ದರು. ಅದನ್ನು ಸಾಬೀತು ಮಾಡಿದರೆ? ಪೆನ್‌ಡ್ರೈವ್ ಇದ್ದರಲ್ಲವೇ ಹೊರಗೆಬಿಡುವುದು ಎಂದು ವ್ಯಂಗ್ಯವಾಡಿದರು.
ಇಲ್ಲ ಸಲ್ಲದ ಗಾಸಿಪ್ ಹರಿಬಿಡುತ್ತಾರೆಡಿಸಿಎಂ ಡಿ.ಕೆ.ಶಿವಕುಮಾರ್, ನಮ್ಮ ಸರ್ಕಾರ ಸುಭದ್ರವಾಗಿದೆ. ಕುಮಾರಸ್ವಾಮಿ ಇಲ್ಲಸಲ್ಲದ ಗಾಸಿಪ್ ಹರಿಬಿಡುತ್ತಾರೆ. ಅವರದ್ದು ಆಧಾರ ರಹಿತವಾದ ಆರೋಪ. ಅಧಿವೇಶನದಲ್ಲಿ ಪೆನ್‌ಡ್ರೈವ್ ತೋರಿಸಿದರು ಆದರೆ ಬಿಡುಗಡೆ ಮಾಡಲಿಲ್ಲ. ಗುತ್ತಿಗೆದಾರರ ವಿಚಾರಾದಲ್ಲೂ ಮಾಡಿರುವ ಆರೋಪ ಆಧಾರ ರಹಿತವಾದದ್ದು ಎಂದು ವಾಗ್ದಾಳಿ ನಡೆಸಿದ್ದಾರೆ.
ಕುಮಾರಸ್ವಾಮಿ ಸೂಚನೆ ಹೇಳುವುದು ಸರಿಯಲ್ಲ!ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್, ಕುಮಾರಸ್ವಾಮಿ ಕೂಡ ಮುಖ್ಯಮಂತ್ರಿಗಳಾಗಿದ್ದವರು. ಆಗಲೂ ನಾನೇ ಗೃಹ ಸಚಿವನಾಗಿದ್ದೆ. ಅವರು ಯಾವ ರೀತಿ ಸಲಹೆ ಸೂಚನೆ ಕೊಡುತ್ತಿದ್ದರು ಎಂಬುದನ್ನು ನಾನು ಹೇಳಿಲ್ಲ. ಅದನ್ನು ಹೇಳುವುದು ಕೂಡ ಚೆನ್ನಾಗಿ ಕಾಣುವುದಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + fourteen =
Remember me
