ಬೆಂಗಳೂರು:ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ 250 ಕೋಟಿ ರೂ. ಮೊತ್ತದ ಬಂಡವಾಳ ಹೂಡಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ:ಚನ್ನಪಟ್ಟಣ ಉಪ ಚುನಾವಣೆ: ನೀವು ನಮ್ಮ ಕೈ ಬಲಪಡಿಸಿ, ನಿಮ್ಮ ಋಣ ತೀರಿಸುತ್ತೇವೆ ಎಂದ ಡಿಕೆ ಶಿವಕುಮಾರ್
ವಿಟೆರಾ ಕಂಪನಿಯ ಪ್ರತಿನಿಧಿಗಳ ಜತೆ ಸಚಿವರು ಇಲ್ಲಿನ ಖನಿಜ ಭವನದಲ್ಲಿ ನಡೆಸಿದ ಸಭೆಯಲ್ಲಿ ಈ ಬಂಡವಾಳ ಹೂಡಿಕೆ ನಿರ್ಧಾರ ಕೈಗೊಳ್ಳಲಾಗಿದೆ.
ವಿಜಯಪುರ ಜಿಲ್ಲೆಯ ಕೃಷಿ ಸಮುದಾಯದ ಬಳಕೆಗೆ ಅತ್ಯಾಧುನಿಕ ಶೈತ್ಯಾಗಾರಗಳನ್ನು ನಿರ್ಮಿಸಿ ರೈತರು ಸುಗ್ಗಿಯ ನಂತರ ಎದುರಿಸುವ ನಷ್ಟ ತಗ್ಗಿಸಲು ಮತ್ತು ಕೃಷಿ ಉತ್ಪನ್ನಗಳ ಉತ್ಪಾದನೆ, ಪೂರೈಕೆ ಹಾಗೂ ಮಾರಾಟ ಪ್ರಕ್ರಿಯೆಯಲ್ಲಿ ದಕ್ಷತೆ ತರಲು ವಿಟೆರಾ ನೆರವಾಗಲಿದೆ. ವಿಟೆರಾ ಕಂಪನಿಯು ಸುಧಾರಿತ ಉತ್ಪಾದನಾ ತಂತ್ರಜ್ಞಾನ ಬಳಸಲಿದೆ. ರಾಜ್ಯದಲ್ಲಿ ಕೆನಡಾದ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಹಾಗೂ ಈ ಬಂಡವಾಳ ಹೂಡಿಕೆಯಿಂದ ಕೃಷಿ ಕ್ಷೇತ್ರದ ಉತ್ಪಾದನೆ ಹೆಚ್ಚಲಿದ್ದು, ಅದರಿಂದ ರಾಜ್ಯದ ಒಟ್ಟಾರೆ ಆರ್ಥಿಕತೆಗೂ ಉತ್ತೇಜನ ದೊರೆಯಲಿದೆ ಎಂದೂ ಸಚಿವರು ಹೇಳಿದ್ದಾರೆ.
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಹಾಗೂ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯದ ರೈತರಿಗೆ ಮೋದಿ ಸರ್ಕಾರದಿಂದ ಗಣೇಶ ಹಬ್ಬದ ಭರ್ಜರಿ ಗಿಫ್ಟ್! ಇಲ್ಲಿದೆ ಮಾಹಿತಿ….

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nine + two =
Remember me
