ಬೆಂಗಳೂರು:ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಇದನ್ನೂ ಓದಿ:ನ್ಯಾಕ್ ಎ++ ಶ್ರೇಣಿ ಪಡೆದು ದಾಖಲೆ ನಿರ್ಮಿಸಿದ ಬೆಂಗಳೂರು ವಿವಿ; ರಾಜ್ಯದ ಏಕೈಕ, ದೇಶದ ಎರಡನೇ ಸರ್ಕಾರಿ ವಿವಿ ಎಂಬ ಹೆಗ್ಗಳಿಕೆ
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್​ಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದ್ದು, ಇಲ್ಲಿವರೆಗೂ ಇಂದಿರಾ ಕ್ಯಾಂಟಿನ್​ಗೆ ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ. 50 ರಷ್ಟು ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ.ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ. 70ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. 30ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಇಂದಿರಾ ಕ್ಯಾಂಟೀನ್ ಆಹಾರಕ್ರಮದಲ್ಲಿ ಬದಲಾವಣೆಇಂದಿರಾ ಕ್ಯಾಂಟೀನ್​ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಯಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನ: ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ತಪ್ಪಿತಸ್ಥರ ವಿರುದ್ದ ತನಿಖೆಕಲುಷಿತ ನೀರಿನ ಸೇವನೆಯಿಂದ ಕೊಪ್ಪಳದಲ್ಲಿ ಇಬ್ಬರು ಹಾಗೂ ರಾಯಚೂರಿನಲ್ಲಿ ಒಬ್ಬರು ಮೃತಪಟ್ಟಿದ್ದು , ತಪ್ಪಿತಸ್ಥರ ವಿರುದ್ದ ಸೂಕ್ತ ತನಿಖೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − fourteen =
Remember me
