ಬೆಂಗಳೂರು:ರಾಜ್ಯದಲ್ಲಿ ಶಾಲೆಗಳು ಆರಂಭವಾಗುವ ಮುನ್ನವೇ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅನುಗುಣವಾಗಿ 27 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯು ಅನುಮತಿ ನೀಡಿದೆ.
2023-24ನೇ ಶೈಕ್ಷಣಿಕ ವರ್ಷವು ಮೇ 29ರಿಂದ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ 6ರಿಂದ 8ನೇ ತರಗತಿಗೆ ನೇಮಕ ಮಾಡಿರುವ 13,352 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕವಾಗುವ ತನಕ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತು ವಿಧಿಸಿ ನೇಮಕ ಮಾಡಿಕೊಳ್ಳುವಂತೆ ಜಿಲ್ಲಾ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಮೇ 27ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
2022-23ನೇ ಸಾಲಿನಲ್ಲಿ ಅಗತ್ಯತೆ/ಹೆಚ್ಚುವರಿ ಶಿಕ್ಷಕರ ಹುದ್ದೆಗಳನ್ನು ಗುರುತಿಸುವ ಮತ್ತು ಮರು ಹೊಂದಾಣಿಕೆ ಪ್ರಕ್ರಿಯೆಯನ್ನು ಈಗಾಗಲೇ ಜಿಲ್ಲಾ ಹಂತದಲ್ಲಿ ನಿಯಮಾನುಸಾರ ಕೈಗೊಳ್ಳಲಾಗಿದೆ. ಇದರ ಆಧಾರದಲ್ಲಿ ಖಾಲಿ ಹುದ್ದೆಗಳಿರುವ ಕಡೆ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲು ಸೂಚಿಸಲಾಗಿದೆ.
ಆದ್ಯತೆ ಮೇರೆಗೆ ತ್ವರಿತವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಜಿಲ್ಲಾ ಉಪ ನಿರ್ದೇಶಕರು ತಾಲ್ಲೂಕುವಾರು ಹುದ್ದೆಗಳ ಮರು ಹಂಚಿಕೆಯನ್ನು ಮೇ 26ರೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು.
ಅತಿಥಿ ಶಿಕ್ಷಕರ ಆಯ್ಕೆಯನ್ನು ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರ ಮೂಲಕವೇ ಮಾಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಖಾಲಿ ಇರುವ ಶಾಲೆಗಳಿಗೆ ಮತ್ತು ಶಿಕ್ಷಕ ರಹಿತ ಶಾಲೆಗಳಿಗೆ ಮೊದಲ ಆದ್ಯತೆಯಾಗಿ ಪರಿಗಣಿಸಲು ಸೂಚಿಸಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಶೇ.100 ಅತಿಥಿ ಶಿಕ್ಷಕರನ್ನು ಆದ್ಯತೆ ಮೇರೆಗೆ ನೇಮಕಾತಿ ಮಾಡಬೇಕು. ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಬೇಕು. ಆಯ್ಕೆ ಮಾಡಿಕೊಂಡ ವಿವರಗಳನ್ನು ಜೂ.10ರೊಳಗೆ ಇಲಾಖೆಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − seven =
Remember me
