ಬೆಳಗಾವಿ:ಚಿಕ್ಕವಯಸ್ಸಿನವರು ಅದರಲ್ಲೂ ನಿಯಮಿತ ವ್ಯಾಯಾಮ ಇತ್ಯಾದಿ ಮಾಡುತ್ತಿರುವವರು ಕೂಡ ಹೃದಯಾಘಾತದಿಂದ ಸಾವಿಗೀಡಾಗುತ್ತಿರುವ ಪ್ರಕರಣ ನಡೆದಿದೆ. ಮೊನ್ನೆಯಷ್ಟೇ 27 ವರ್ಷದ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ದು, ಇಂದು 29 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಪಿಕ್​ನಿಕ್​ಗೆ ತೆರಳಿದ್ದ 27 ವರ್ಷದ ಯುವಕ ಹೃದಯಾಘಾತದಿಂದ ಸಾವು!
ಬೆಳಗಾವಿಯ ಕಾಕತಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಕಾನ್​ಸ್ಟೆಬಲ್​ ಮೆಹಬೂಬ್ ರೇಶ್ಮಿ (29) ಮೃತಪಟ್ಟವರು. ಇಂದು ಬೆಳಗ್ಗೆ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಇವರು ಎದೆನೋವು ಬಂದ ಕಾರಣ ಮನೆಗೆ ತೆರಳಿದ್ದರು. ನಂತರ ಕೆಲವೇ ಹೊತ್ತಲ್ಲಿ ಅವರ ಮನೆಯಿಂದ ಠಾಣೆಗೆ ಕರೆಬಂದಿದ್ದು, ಸಹೋದ್ಯೋಗಿಗಳು ಬಂದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಹೃದಯಾಘಾತಕ್ಕೀಡಾಗಿ ಮೃತಪಟ್ಟರು.
ಇದನ್ನೂ ಓದಿ:ಖ್ಯಾತ ವಕೀಲ ಸಿ.ವಿ.ನಾಗೇಶ್ ಪುತ್ರ ಅರುಣ್ ಅವಧಾನಿ ಹೃದಯಾಘಾತದಿಂದ ನಿಧನ
ಮೆಹಬೂಬ್ ಪತ್ನಿ ಕೂಡ ಪೊಲೀಸ್ ಆಗಿದ್ದು, ಇಬ್ಬರೂ ಒಂದೇ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಮೆಹಬೂಬ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮೆಹಬೂಬ್ ನಿಧನಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಸಹೋದ್ಯೋಗಿ ಅಧಿಕಾರಿ-ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ಮುಖಂಡ!
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:4 × four =
Remember me
