ವಿಜಯಪುರ: ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ಭೌತಶಾಸ್ತ್ರ ವಿಷಯದ ಪರೀಕ್ಷೆ ಆರಂಭವಾದ ಒಂದು ಗಂಟೆಯಲ್ಲೇ ಅದರ ಪ್ರಶ್ನೆ ಪತ್ರಿಕೆಯ ಕೆಲವು ಪುಟಗಳ ಫೋಟೋವನ್ನು ವಾಟ್ಸ್​ಆ್ಯಪ್​ ಮೂಲಕ ಶೇರ್ ಮಾಡಿದ ಪ್ರಕರಣ ವರದಿ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ದೂರು ದಾಖಲಿಸಿದೆ. ಪರಿಣಾಮ, ಈ ಕೃತ್ಯವೆಸಗಿದ ಇಬ್ಬರನ್ನು ಇಂಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮುರುಘೇಂದ್ರ ಹಿರೇಮಠ (19) ಮತ್ತು ಬಾಗಪ್ಪ ಸಗರ(22) ಎಂದು ಗುರುತಿಸಲಾಗಿದೆ. ಪ್ರಶ್ನೆಪತ್ರಿಕೆಯನ್ನು ಹಿಡಿದು ಮುರುಘೇಂದ್ರ ಹಿರೇಮಠ ಕ್ಯಾಮೆರಾಗೆ ಫೋಸ್ ಕೊಟ್ಟರೆ, ಬಾಗಪ್ಪ ಸಗರ ಫೋಟೋ ತೆಗೆದು ಶೇರ್ ಮಾಡಿದ್ದ.
ಮುರುಘೇಂದ್ರ ಹಿರೇಮಠ ಪರೀಕ್ಷಾರ್ಥಿಯಾಗಿದ್ದು, ಪರೀಕ್ಷಾ ಕೇಂದ್ರದ ಒಳಗಿದ್ದ. ಕಿಟಕಿ ಮೂಲಕ ಹೊರಗೆ ಕಾಣಿಸುವಂತೆ ಆತ ಪ್ರಶ್ನೆ ಪತ್ರಿಕೆಯನ್ನು ಹಿಡಿದುಕೊಂಡಿದ್ದ. ಬಾಗಪ್ಪ ಸಗರ ಹೊರಗೆ ನಿಂತು ಇದರ ಫೋಟೋ ತೆಗೆದಿದ್ದ. ಇದಕ್ಕೆ ಸಂಬಂಧಿಸಿ, ಪರೀಕ್ಷಾ ಕೇಂದ್ರದ ಸೂಪರ್ ವೈಸರ್ ಎಂ. ಡಿ. ನಾರಾಯಣಕರ ಅಮಾನತು ಮಾಡಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:3 − 2 =
Remember me
