ಇಂಡಿ/ವಿಜಯಪುರ:ದ್ವಿತೀಯ ಪಿಯುಸಿ ಪರೀಕ್ಷೆ ಮೊದಲ ದಿನವೇ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ !  ಇಂಡಿ ಪಟ್ಟಣದ ಶ್ರೀ ಶಾಂತೇಶ್ವರ ಪಪೂ ಕಾಲೇಜಿನಲ್ಲಿ ಬುಧವಾರ ಇಂಥದ್ದೊಂದು ಘಟನೆ ನಡೆದಿದ್ದು ಅಭ್ಯರ್ಥಿ ಸಹಿತ ಇಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದ್ದು ಪರೀಕ್ಷಾ ಮೇಲ್ವಿಚಾರಕಿಯನ್ನು ಅಮಾನತು ಮಾಡಲು ಶಿಫಾರಸ್ಸು ಮಾಡಲಾಗಿದೆ.
ಮುರುಗೇಂದ್ರ ಹಿರೇಮಠ ಹಾಗೂ ಬಾಗಪ್ಪ ಸಗರ ಎಂಬುವರ ಮೇಲೆ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ. ಪರೀಕ್ಷಾ ಮೇಲ್ವಿಚಾರಕಿ ಶ್ರೀಮತಿ ಎಂ.ಡಿ. ನಾರಾಯಣಕರ ಇವರ ಅಮಾನತ್ತಿಗೆ ಸೂಚಿಸಲಾಗಿದೆ. ಅತೀ ಸೂಕ್ಷ್ಮ ಕೇಂದ್ರವಾಗಿರುವ ಶಾಂತೇಶ್ವರ ಕಾಲೇಜಿನ ಒಟ್ಟು 7 ಪರೀಕ್ಷಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಸದರಿ ಕೇಂದ್ರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಹೆಚ್ಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.
ಘಟನೆ ವಿವರ:ಬುಧವಾರ ಬೆಳಗ್ಗೆ 10.30ಕ್ಕೆ ಭೌತಶಾಸ್ತ್ರ ಪರೀಕ್ಷೆ ಆರಂಭವಾಗುತ್ತಿದ್ದಂತೆ ಶಾಂತೇಶ್ವರ ಕಾಲೇಜಿನ ಹಿಂಬದಿಯ ಬಡಾವಣೆಯಿಂದ ನಕಲು ಪೂರೈಕೆಗೆ ತಂಡವೊಂದು ಕಾತರಿಸಿ ನಿಂತಿತ್ತು. ಈ ವೇಳೆ ಬಾಗಪ್ಪ ಸಗರ ಮಾಳಿಗೆ ಮೇಲಿಂದ ಹಿಂಬದಿ ಜಿಗಿದು ಪರೀಕ್ಷಾ ಕೊಠಡಿಯ ಕಿಟಕಿ ಬಳಿ ಬಂದಿದ್ದಾನೆ. ಮುರುಗೇಂದ್ರ ಪ್ರಶ್ನೆ ಪತ್ರಿಕೆ ಹೊರಚಾಚಿದ್ದು ಬಾಗಪ್ಪ ಅದನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾನೆ. ಆಗ ಬಾಗಪ್ಪನ ಸಹಿತ ಪ್ರಶ್ನೆ ಪತ್ರಿಕೆ ಚಿತ್ರದಲ್ಲಿ ಸೆರೆಯಾಗಿದೆ. ಸದರಿ ಫೋಟೊಗಳು ವಾಟ್ಸ್‌ಪ್‌ಗಳಲ್ಲಿ ಹರಿದಾಡುತ್ತಿದ್ದಂತೆ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ.
ಇದನ್ನೂ ಓದಿ:ದ್ವಿತೀಯ ಪಿಯು ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಅಲ್ಲ ಅದು: ಪದವಿಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟನೆ
ಪ್ರಕರಣ ಶಿಕ್ಷಣ ಸಚಿವರು ಹಾಗೂ ಪ್ರಧಾನ ಕಾರ್ಯದರ್ಶಿಯವರಿಗೂ ತಲುಪಿ ಅವರ ಸೂಚನೆ ಮೇರೆಗೆ ಜಿಲ್ಲಾಡಳಿತ ಸ್ಥಳಕ್ಕೆ ದೌಡಾಯಿಸಿದೆ. ಪರಿಶೀಲನೆ ವೇಳೆ ಫೋಟೊ ಕ್ಲಿಕ್ಕಿಸಿಕೊಂಡಾತ ತಪ್ಪೊಪ್ಪಿಕೊಂಡಿದ್ದಾನೆ. ಜತೆಗೆ ಪರೀಕ್ಷಾ ಕೇಂದ್ರ ಜಾಲಾಡಲಾಗಿ ಹೆಚ್ಚಿನವರು ನಕಲು ಮಾಡುತ್ತಿದ್ದ ಅಂಶ ಬಯಲಾಗಿದೆ. ಪ್ರಶ್ನೆ ಪತ್ರಿಕೆ ತೋರಿಸಿದ ಮುರುೇಂದ್ರ ಹಾಗೂ ಬಾಗಪ್ಪ ಸಗರ ಈತನ ಮೇಲೆ ಮಾಲ್ ಪ್ರಾಕ್ಟಿಸ್ ಕೇಸ್ ದಾಖಲಿಸಲಾಗಿದೆ. ತನಿಖೆ ಮುಂದುವರಿದಿರುವುದಾಗಿ ಎಸ್‌ಪಿ ಅನುಪಮ ಅಗರವಾಲ ಪ್ರತಿಕ್ರಿಯಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ. ಪರೀಕ್ಷೆ ಆರಂಭದ ನಂತರ ಮೊಬೈಲ್‌ನಲ್ಲಿ ಪ್ರಶ್ನೆ ಪತ್ರಿಕೆ ಸೆರೆ ಹಿಡಿಯಲಾಗಿದೆ. ತ್ವರಿತವಾಗಿ ಪರೀಕ್ಷಾ ಕೇಂದ್ರಕ್ಕೆ ತರಳಿ ಸೂಕ್ರ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ಕಡೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಈ ಘಟನೆ ಕೊಠಡಿಯ ಹೊರಭಾಗದಲ್ಲಿ ನಡೆದಿದೆ. ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.ವೈ.ಎಸ್. ಪಾಟೀಲ,ಜಿಲ್ಲಾಧಿಕಾರಿ
ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಮೊದಲ ದಿನವೇ ಲೀಕ್ ಆಯಿತಾ ಪ್ರಶ್ನೆಪತ್ರಿಕೆ?!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + eight =
Remember me
