ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಮೊದಲ ದಿನವಾದ ಇಂದು ಪರೀಕ್ಷೆ ಆರಂಭವಾಗಿ ಒಂದು ಗಂಟೆಯ ಬಳಿಕ ವಿಜಯಪುರ ಜಿಲ್ಲೆಯಲ್ಲಿ ಭೌತಶಾಸ್ತ್ರದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಸುದ್ದಿ ವರದಿಯಾಗಿದೆ. ರಾಜ್ಯದಲ್ಲಿ 2 ಲಕ್ಷ ವಿದ್ಯಾರ್ಥಿಗಳು ಭೌತಶಾಸ್ತ್ರ ಪರೀಕ್ಷೆ ಬರೆದಿದ್ದು, ಅವರು ಬರೆಯಲು ಆರಂಭಿಸಿದ ಒಂದು ಗಂಟೆಯ ನಂತರ ಈ ಘಟನೆ ಸಂಭವಿಸಿದೆ. ಹೀಗಾಗಿ ಇದು ಪ್ರಶ್ನೆ ಪತ್ರಿಕೆ ಸೋರಿಕೆ ಅಲ್ಲ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಮೊದಲ ದಿನವೇ ಲೀಕ್ ಆಯಿತಾ ಪ್ರಶ್ನೆಪತ್ರಿಕೆ?!
ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆ ಮಾಡದಂತೆ ನಿಷೇಧಿಸಿದ ನಿಯಮವೂ ಜಾರಿಯಲ್ಲಿದೆ. ಅರ್ಥಾತ್ ಮೊಬೈಲ್ ಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಅಥವಾ ಬಳಕೆ ಮಾಡುವುದಕ್ಕೆ ಅವಕಾಶ ನಿಷೇಧಿಸಲಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ತಿಳಿವಳಿಕೆ ಮೂಡಿಸಲು ಸಾಕಷ್ಟು ಪ್ರಚಾರವನ್ನೂ ಮಾಡಲಾಗಿತ್ತು.ಹೀಗಾಗಿ, ಪ್ರಶ್ನೆ ಪತ್ರಿಕೆಯ ಕೆಲವು ಪುಟಗಳನ್ನು ಮೊಬೈಲ್ ಮೂಲಕ ಫೋಟೊ ತೆಗೆದು ಶೇರ್ ಮಾಡಿದ ಈ ಪ್ರಕರಣವನ್ನು ಪರೀಕ್ಷಾ ಅಕ್ರಮ ಎಂದು ಪರಿಗಣಿಸಲಾಗಿದೆ. ಈ ಅಪರಾಧವನ್ನು ಶಿಕ್ಷಣ ಕಾಯಿದೆಯ ಸೆಕ್ಷನ್ 24(ಎ) ಪ್ರಕಾರ ಮತ್ತು ಜಾರಿಯಲ್ಲಿರುವ ಇತರೆ ಕಾನೂನು ಪ್ರಕಾರ ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲಾಗುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಅಲ್ಲಿನ ಜಿಲ್ಲಾಧಿಕಾರಿ ಮತ್ತು ಎಸ್​ಪಿಗೆ ಸೂಚಿಸಲಾಗಿದೆ.
ಇನ್ನು ಉಳಿದಂತೆ, ಬೇರೆ ಯಾವುದೇ ತೊಂದರೆ ಆಗಿಲ್ಲ. ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿಯೂ ಯಾವುದೇ ತೊಂದರೆ ಇಲ್ಲದೆ ಪರೀಕ್ಷೆ ಸುಗಮವಾಗಿ ನೆರವೇರಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + eleven =
Remember me
