ಬೆಂಗಳೂರು:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯನ್ನು ನೀಡಿದೆ. ಈ ಹಿಂದೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಮೇ 22 ರಿಂದ ಜೂನ್​ 2ರವರೆಗೆ ನಡೆಸಲು ಮಂಡಳಿ ತೀರ್ಮಾನಿಸಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು.
ಆದರೆ CET ಪರೀಕ್ಷೆ ಆರಂಭವಾದ ಹಿನ್ನಲೆಯಲ್ಲಿ, ಮೇ 22ರಿಂದ ಆರಂಭವಾಗಬೇಕಿದ್ದ ಪೂರಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷಾ ಮಂಡಳಿಯು ನೂತನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮೇ 23 ರಿಂದ ಜೂನ್​ 2ರವರೆಗೆ ಪರೀಕ್ಷೆಗಳು ನಡೆಯಲಿವೆ. ಈ ಪರಿಷ್ಕೃತ ವೇಳಾಪಟ್ಟಿಯನ್ನು https://kseab.karnataka.gov.in ರಲ್ಲಿ ಪ್ರಕಟಿಸಲಾಗಿದೆ.
ಇದನ್ನೂ ಓದಿ:ಕಾಶ್ಮೀರದಲ್ಲಿ ಪತ್ತೆಯಾಯ್ತು ಚಂದ್ರನಾಕಾರದ ಬಲೂನ್​; ಪಾಕಿಸ್ತಾನದಿಂದ ಬೇಹುಗಾರಿಕೆ ಶಂಕೆ
ಮೇ 23ರಂದು ಕನ್ನಡ ಮತ್ತು ಅರೇಬಿಕ್​, 24ರಂದು ಐಚ್ಚಿಕ ಕನ್ನಡ, ರಸಾಯನಶಾಸ್ತ್ರ ಮತ್ತು ಮೂಲಗಣಿತ, 25ರಂದು ಇಂಗ್ಲೀಷ್​, 26ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ ಮತ್ತು ಗಣಕ ವಿಜ್ಞಾನ, 27ರಂದು ಇತಿಹಾಸ ಮತ್ತು ಸಂಖ್ಯಾಶಾಸ್ತ್ರ, 29ರಂದು ಹಿಂದಿ, 30ರಂದು ಭೂಗೋಳಶಾಸ್ತ್ರ, ಮನಃಶಾಸ್ತ್ರ ಹಾಗೂ ಭೌತಶಾಸ್ತ್ರ, 31ರಂದು ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣಶಾಸ್ತ್ರ ಮತ್ತು ಗೃಹ ವಿಜ್ಞಾನ ನಡೆಯಲಿವೆ.
ಜೂನ್​ 1ರಂದು ರಾಜ್ಯಶಾಸ್ತ್ರ ಮತ್ತು ಗಣಿತಶಾಸ್ತ್ರ, 2ರಂದು ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ ಮತ್ತು ವ್ಯವಹಾರ ಅಧ್ಯಯನ , 03ರಂದು ಅರ್ಥಶಾಸ್ತ್ರ ಹಾಗೂ ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.(ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × five =
Remember me
