ಬೆಂಗಳೂರು:ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷಾ ಫಲಿತಾಂಶದಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪದವಿ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿನಲ್ಲೇ ಪ್ರವೇಶ ಪಡೆಯಲು ಕಾಲೇಜು ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ.
ಪೂರಕ ಪರೀಕ್ಷೆ 2ರಲ್ಲಿ ಉತ್ತಿರ್ಣರಾಗಿರುವವರಿಗೆ ಸೆ.13ರಿಂದ ಮುಂದಿನ ಹತ್ತು ದಿನಗಳ ಕಾಲ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅವಕಾಶ ನೀಡಲಾಗಿದೆ.
ಈ ಸಂಬಂಧ ಕಾಲೇಜುಗಳು ತಮ್ಮ ನೋಟಿಸ್‌ ಬೋರ್ಡ್‌ನಲ್ಲಿ ಮಾಹಿತಿ ಪ್ರಕಟಿಸಬೇಕು. ಉನ್ನತ ಶಿಕ್ಷಣ ಇಲಾಖೆಯ ಸಮಗ್ರ ವಿಶ್ವವಿದ್ಯಾಲಯ ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್‌) ವೆಬ್‌ಸೈಟ್‌ ಮುಖಾಂತರ ಪ್ರವೇಶ ಪಡೆಯಲು ಮಾರ್ಗದರ್ಶನ ನೀಡಬೇಕು. ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಕೂಲವಾಗುವಂತೆ ಕಾಲೇಜಿನ ಕಂಪ್ಯೂಟರ್‌ ಲ್ಯಾಬ್‌ಗಳನ್ನು ಬಳಸಿಕೊಳ್ಳಬೇಕು ಎಂದು ಪದವಿ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಿ ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 9 =
Remember me
