ಬೆಂಗಳೂರುಸ್ನಾತಕೋತ್ತರ ದಂತ ವೈದ್ಯಕೀಯ (ಪಿಜಿಇಟಿ- ಎಂಡಿಎಸ್-24) ಕೋರ್ಸ್‌ನ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆ. 3ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಮೊದಲನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಆಯ್ಕೆ-2 ಆಯ್ಕೆ ಮಾಡಿ, ಶುಲ್ಕ ಪಾವತಿಸಿರುವವರು, ಆಯ್ಕೆ-3 ಅನ್ನು ಆಯ್ಕೆ ಮಾಡಿರುವವರು ಹಾಗೂ ಯಾವುದೇ ಸೀಟು ಹಂಚಿಕೆಯಾಗದೇ ಇರುವವರು ಆ.3ರಿಂದ ಕೆಇಎ ಕಚೇರಿಯಲ್ಲಿ ತಮ್ಮ ಎಲ್ಲ ಮೂಲ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ದಾಖಲೆ ಸಲ್ಲಿಸದಿದ್ದರೆ ಅಂತಹವರಿಗೆ ಸೀಟು ಹಂಚಿಕೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಎರಡನೇ ಸುತ್ತಿನ ಸೀಟು ಹಂಚಿಕೆಗೆ ಆ.3ರಂದು ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಲಾಗುತ್ತದೆ. ಆ.4ರಿಂದ 6ರವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಸಮಯ ನೀಡಲಾಗುತ್ತದೆ. ಆ.7ರಂದು ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಹಾಗೂ ಆ.8ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ನಂತರ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಲು ಹಾಗೂ ಕಾಲೇಜಿಗೆ ವರದಿ ಮಾಡಿಕೊಳ್ಳಲು ಆ.13 ಕೊನೆ ದಿನ ಎಂದು ಅವರು ವಿವರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − nine =
Remember me
