ಹುಬ್ಬಳ್ಳಿ:ಓಮ್ನಿ ಕಾರು, ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಹೆಬಸೂರ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಕೊಪ್ಪಳ ತಾಲ್ಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್​ಸಾಬ್ ​(60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6)  ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಧಾರವಾಡದ ಎಸ್​ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಪಾರ್ಶವಾಯುಗೆ ಔಷಧಿ ತರಲೆಂದು ಜಾಫರ್​ಸಾಬ್​ ಕುಟುಂಬದವರ ಜೊತೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಹಳಗಾ ಗ್ರಾಮದಲ್ಲಿರುವ ಸೇಂಟ್ ಮೇರಿ ಆಸ್ಪತ್ರೆಗೆ ಹೋಗಿದ್ದರು. ಔಷಧಿ ಪಡೆದು ಊರಿಗೆ ವಾಪಸ್​ ಆಗುತ್ತಿದ್ದ ವೇಳೆ ರಾತ್ರಿ 10 ಗಂಟೆ ಸುಮಾರಿಗೆ ಹೆಬಸೂರ ಗ್ರಾಮದ ಬಳಿಕ ಕಾರು ಹಾಗೂ ಲಾರಿ ನಡುವೆ ಅಪಘಾತದ ಸಂಭವಿಸಿದೆ.
ಅಪಘಾತ ಸಂಭವಿಸಿದ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಎಸ್​ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭೇಡಿ ನೀಡಿದ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + four =
Remember me
