ಉಡುಪಿ:ಉಡುಪಿಯ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೋ ಮಾಡಿರುವ ಪ್ರಕರಣ ನಡೆದಿದ್ದು ಅನೇಕ ವಿವಾದಗಳಿಗೆ ಕಾರಣವಾಗುತ್ತಿದೆ.
ಈ ಪ್ರಕರಣದ ಬೆನ್ನಲ್ಲೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಭೇಟಿ ನೀಡಿದ್ದರು. ಅವರು ನೀಡಿದ್ದ ಹೇಳಿಕೆಯೂ ವಿವಾದಕ್ಕೆ ಕಾರಣವಾಗಿತ್ತು. ಅವರ ಹೇಳಿಕೆ ಬೆನ್ನಲ್ಲೇ ಹಿಂದೂ ಜಾಗರಣ ವೇದಿಕೆ ಸದಸ್ಯನೊಬ್ಬ ನೀಡಿದ್ದ ಹೇಳಿಕೆಯೂ ಭಾರಿ ಸದ್ದು ಮಾಡುತ್ತಿದೆ.
ಇದನ್ನೂ ಓದಿ:ಉಡುಪಿ ಪ್ರಕರಣದ ಆರೋಪಿಗಳಿಗೆ ತಕ್ಕ ಶಿಕ್ಷೆ ನೀಡಲು ಆಗ್ರಹ; ಎಬಿವಿಪಿ ಕಾರ್ಯಕರ್ತರಿಂದ ಮನವಿ ಸಲ್ಲಿಕೆ
ಈ ಹಿಂದೆ ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದರು. ಇದೀಗ ಈ ಪ್ರಕರಣದ ಪ್ರಮುಖ ಆರೋಪಿಗಳಾದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರಾದ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾಗೆ ನಿರೀಕ್ಷಣಾ ಜಾಮೀನು ಲಭಿಸಿದೆ. ಇಂದು ಈ ಮೂವರು ವಿದ್ಯಾರ್ಥಿನಿಯರು ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಇಂದು ಬೆಳಗ್ಗೆ ವಕೀಲರ ಮೂಲಕ ಉಡುಪಿ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗಾಗಿ ಆರೋಪಿ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಿದ್ದರು. ಇದೀಗ ಉಡುಪಿಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
