ಬೆಂಗಳೂರು:ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಮೂವರು ಅಧಿಕಾರಿಗಳನ್ನು ಅಮಾನತು ಗೊಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.
ಭೂ ಒಡೆತನ ಯೋಜನೆಯಲ್ಲಿ ಲಂಚ ಪಡೆದ ಆರೋಪದಡಿ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಬಂಧಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ;ಪುನರಾರಂಭದವರೆಗೆ ಶಾಲೆಗಳು ವಾರ್ಷಿಕ, ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ; ದೆಹಲಿ ಹೈಕೋರ್ಟ್​ ಮಹತ್ವದ ಆದೇಶ
ನಿಗಮದ ಪ್ರಧಾನ ವ್ಯವಸ್ಥಾಪಕ ಎಸ್.ಎಸ್. ನಾಗೇಶ್, ಸಹಾಯಕ ಪ್ರಧಾನ ವ್ಯವಸ್ಥಾಪಕಿ ಮಂಜುಳಾ, ಮತ್ತು ಕಚೇರಿ ಅಧೀಕ್ಷಕ ಪಿ.ಡಿ. ಸುಬ್ಬಪ್ಪ ಕರ್ನಾಟಕ ನಾಗರಿಕ ಸೇವಾ ನಿಯಮದನ್ವಯ ಕರ್ತವ್ಯ ಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದ್ದು, ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತು ಮಾಡಲಾಗಿದೆ. ಅಮಾನತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡಬಾರದು ಎಂದು ಆದೇಶಿಸಲಾಗಿದೆ ಎಂದು ಕಾರಜೋಳ ಹೇಳಿದ್ದಾರೆ.
ನಿಗಮದ ಕಚೇರಿ ಹಾಗೂ ಇಬ್ಬರು ವ್ಯಪಸ್ಥಾಪಕರ ಮನೆಯಲ್ಲಿ ಒಟ್ಟು 82 ಲಕ್ಷ ರೂ.ಗಳನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಕಡಿಮೆ ಬೆಲೆಗೆ ಭೂಮಿ ಖರೀದಿಸಿ ಅದಕ್ಕೆ ಹೆಚ್ಚಿನ ಬೆಲೆಯನ್ನು ನಮೂದಿಸುತ್ತಿದ್ದರು. ಇದೇ ರೀತಿಯಲ್ಲಿ ರಾಯಚೂರು ಜಿಲ್ಲೆಗೆ 8 ಕೋಟಿ ರೂ.ಗಳನ್ನು ಮಂಜೂರು ಮಾಡಲು ಕಡತ ಸಿದ್ಧಪಡಿಸಲಾಗಿತ್ತು. ಇದರಲ್ಲಿ 56 ಲಕ್ಷ ರೂ. ಲಂಚದ ಹಣ ಕಚೇರಿ ಅಧೀಕ್ಷಕ ಸುಬ್ಬಪ್ಪ ಕೈ ಸೇರಲಿದೆ ಎಂಬ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು.
ಮಂಗಳವಾರ ಶಾಲಾ- ಕಾಲೇಜು ಓಪನ್​; ವಿದ್ಯಾರ್ಥಿಗಳಿಗೆ ತರಬೇತಿ, ಸಿದ್ಧತೆ ಪೂರ್ಣಗೊಂಡಿರೋದೆಲ್ಲಿ ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
