ಬೆಂಗಳೂರು:ವನ್ಯಜೀವಿ-ಮಾನವ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಕಾಡಿನಂಚಿನ ಗ್ರಾಮಗಳಿಗೆ ರಾತ್ರಿಯ ವೇಳೆಗೆ ಬದಲಾಗಿ ಹಗಲು ಹೊತ್ತಿನಲ್ಲಿ ಮಾತ್ರವೇ 3 ಫೇಸ್ ವಿದ್ಯುತ್ ಒದಗಿಸುವಂತೆ ಮುಖ್ಯಮಂತ್ರಿಯವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.ಈ ಸಂಬಂಧ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯಾದ್ಯಂತ ಕಾಡಿನಂಚಿನಲ್ಲಿರುವ ಪ್ರದೇಶಗಳಿಗೆ ಆನೆ, ಹುಲಿ, ಚಿರತೆ ಸೇರಿದಂತೆ ಹಲವು ಕಾಡು ಪ್ರಾಣಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಾಣ ಹಾನಿ ಆಗುತ್ತಿದೆ. ರಾತ್ರಿಯ ವೇಳೆ 3 ಫೇಸ್ ವಿದ್ಯುತ್ ಪೂರೈಕೆ ಮಾಡಿದರೆ ರೈತರು ಪಂಪ್ ಸೆಟ್ ಆನ್ ಮಾಡಲು ಮತ್ತು ಆಫ್ ಮಾಡಲು ರಾತ್ರಿಯ ವೇಳೆ ಸಂಚರಿಸುವ ಕಾರಣ ಸಂಘರ್ಷ ಹೆಚ್ಚುತ್ತದೆ. ಹೀಗಾಗಿ ಬೆಳಗಿನ ಹೊತ್ತು 3ಫೇಸ್ ವಿದ್ಯುತ್ ಪೂರೈಸುವುದು ಸೂಕ್ತ ಎಂಬುದು ತಜ್ಞರ ಅಭಿಪ್ರಾಯವಾಗಿದೆ ಎಂದು ತಿಳಿಸಿದ್ದಾರೆ.ಈ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳಿಗೆ ರಾತ್ರಿಯ ವೇಳೆ 3 ಫೇಸ್ ವಿದ್ಯುತ್ ಒದಗಿಸುವಂತೆ ಇಂಧನ ಇಲಾಖೆಗೆ ನಿರ್ದೇಶನ ನೀಡುವಂತೆ ಇಂಧನ ಸಚಿವರನ್ನೂ ಕೋರಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:16 + ten =
Remember me
