ಹಾವೇರಿ:ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಂತಗಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
SSLC ಓದುತ್ತಿದ್ದ ಮಂತಗಿ ಗ್ರಾಮದ ಅಹ್ಮದ್ ಅಂಚಿ (15) ಸಾಹಿಲ್ ಡೊಂಗ್ರೆ (15) ಅಖ್ತರ್ ರಾಜಾ ಯಲವಟ್ಟಿ (15) ಮೃತ ದುರ್ದೈವಿಗಳು.
ಶಾಲೆಗೆ ಇಂದು ರಜೆ ಹಿನ್ನಲೆಯಲ್ಲಿ ಹೊಂಡಕ್ಕೆ ಈಜಲು ಹೋಗಿದ್ದ ಬಾಲಕರು ಹೊಂಡದಲ್ಲಿ ಈಜಲಾಗದೆ ಒಬ್ಬರನ್ನೊಬ್ಬರು ಕಾಪಾಡಲು ಹೋಗಿ ಬಾಲಕರು ದುರ್ಮರಣವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮೃತ ಮಕ್ಕಳನ್ನು ಅಗ್ನಿಶಾಮಕ ಸಿಬ್ಬಂದಿ ಕೆರೆಯಿಂದ ಹೊರ ತೆಗೆದಿದ್ದಾರೆ. ಸ್ಥಳಕ್ಕೆ ಹಾನಗಲ್ ತಹಶೀಲ್ದಾರ ಮತ್ತು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಾನಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲ್ಲಂಗಡಿ ಹಣ್ಣು ತಿಂದು ಬಾಲಕರಿಬ್ಬರ ದುರ್ಮರಣ: ನಿಗೂಢ ಪ್ರಕರಣ ಬೆನ್ನತ್ತಿ ಹೋದ ಪೊಲೀಸರಿಗೆ ಕಾದಿತ್ತು ಶಾಕ್​!

ಚತ್ತೀಸ್​ಗಢದಲ್ಲಿ ನಡೆದ ನಕ್ಸಲ್ ದಾಳಿಯಲ್ಲಿ 22 ಯೋಧರು ಹುತಾತ್ಮ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − one =
Remember me
