ಬೆಂಗಳೂರು :ಬಿಜೆಪಿ, ಜೆಡಿಎಸ್ ಮೈತ್ರಿಯಿಂದ ನಗರ ಸ್ಥಳೀಯ ಸಂಸ್ಥೆಗಳ ಚುಕ್ಕಾಣಿಯ ಲೆಕ್ಕಾಚಾರಗಳೇ ಬದಲಾಗುತ್ತಿವೆ.
ಮೈತ್ರಿ ಪೂರ್ವ ರಾಜಕೀಯ ಲೆಕ್ಕಾಚಾರಗಳು ಬಹುತೇಕ ಕಡೆ ಬುಡಮೇಲಾಗುತ್ತಿವೆ. ಇನ್ನು ಕೆಲವು ಕಡೆ ಸರ್ಕಾರದ ಪ್ರಭಾವ ಬಳಸಿ ಕಾಂಗ್ರೆಸ್ ಮೇಲುಗೈ ಸಾಧಿಸುವ ಸಾಧ್ಯತೆಗಳೂ ಇವೆ.
ಒಂದು, ಒಂದೂವರೆ ವರ್ಷದಿಂದ ಮೀಸಲಾತಿ ಗೊಂದಲದಿಂದ 61 ನಗರಸಭೆ, 123 ಪುರಸಭೆ, 117 ಪಟ್ಟಣ ಪಂಚಾಯಿತಿಗಳಲ್ಲಿ ಚುನಾಯಿತ ಪ್ರತಿನಿಧಿಗಳ ಸರ್ಕಾರವೇ ಅಸ್ಥಿತ್ವದಲ್ಲಿ ಇರಲಿಲ್ಲ. ಈಗ ಸರ್ಕಾರ ಮೀಸಲಾತಿ ನಿದಗಿಪಡಿಸಿ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಗರಿಗೆದರಿದೆ.
ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಯಾವ ಪಕ್ಷ ಹೆಚ್ಚು ಸದಸ್ಯ ಸ್ಥಾನ ಪಡೆಯುತ್ತದೆಯೋ ಅದು ಅಧಿಕಾರ ಸೂತ್ರ ಹಿಡಿಯುವ ಸ್ಥಿತಿ ಇತ್ತು. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡ ಲವಾಗಿ ಅದರ ಪರಿಣಾಮ ನಗರ ಸ್ಥಳೀಯ ಸಂಸ್ಥೆಗಳ ಮೇಲೂ ಬೀರುತ್ತಿದೆ. ಇದರಿಂದಾಗಿ ಅನೇಕ ಕಡೆ ಬಿಜೆಪಿ-ಜೆಡಿಎಸ್ ಮೈತ್ರಿ ಮೇಲುಗೈ ಸಾಧಿಸುವ ಲಕ್ಷಗಣಗಳು ಮೇಲ್ನೋಟಕ್ಕೆ ಕಂಡು ಬರುತ್ತಿವೆ.ಎಲ್ಲೆಲ್ಲಿ ಅತಂತ್ರ ಸ್ಥಿತಿ ಇದೆಯೋ ಅಲ್ಲೆಲ್ಲ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಾಯಕರು ತಮ್ಮ ಪ್ರಭಾವ ಬಳಸಿ ನಗರ ಸ್ಥಳೀಯ ಸಂಸ್ಥೆಗಳನ್ನು ಹಿಡಿತದಲ್ಲಿಟ್ಟುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಹಾಗಾಗಿ ಈ ಮೊದಲಿದ್ದ ಲೆಕ್ಕಾಚಾರಗಳು ಉಲ್ಟಾಪಲ್ಟಾ ಆಗುತ್ತವೆ ಎಂದು ಹೇಳಲಾಗುತ್ತಿದೆ.ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ಆಕಾಂಕ್ಷಿಗಳು ತಮ್ಮ ತಮ್ಮ ಪಕ್ಷದ ನಾಯಕರು, ಶಾಸಕರು, ಸಚಿವರ ಬೆನ್ನು ಬಿದ್ದಿದ್ದಾರೆ. ಹಾಗಾಗಿ ಚುನಾವಣೆ ರಂಗೇರಿದೆ.
ಜಿಲ್ಲಾಧಿಕಾರಿಗಳಿಂದ ಅಧಿಸೂಚನೆ:ಜಿಲ್ಲಾಧಿಕಾರಿಗಳು ಈ ಸಂಸ್ಥೆಗಳ ಚುನಾವಣೆ ದಿನಾಂಕ ೋಷಣೆ ಮಾಡಲಿದ್ದಾರೆ. ಆಯಾ ಸ್ಥಳೀಯ ಸ್ಥಿತಿ-ಗತಿ ಆಧರಿಸಿ ಚುನಾವಣಾ ಅಧಿಸೂಚನೆ ಪ್ರಕಟಿಸಲಾಗುತ್ತದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 8 =
Remember me
