| ರಾಯಣ್ಣ ಆರ್.ಸಿ.ಬೆಂಗಳೂರುಕೇಂದ್ರ ಸರ್ಕಾರವು 2023-24ನೇ ಸಾಲಿನಲ್ಲಿ ಕಬ್ಬು ನುರಿಸುವ ಹಂಗಾಮಿಗೆ ಕಬ್ಬು ಬೆಳೆಗಾರರಿಗೆ ಮತ್ತಷ್ಟು ಪ್ರಯೋಜನವಾಗಲಿ ಎಂಬ ಉದ್ದೇಶದಿಂದ ಪ್ರತಿಟನ್ ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್​ಆರ್​ಪಿ) 3,150 ರೂ. ನೀಡಬೇಕು ಎಂದು ನಿಗದಿ ಮಾಡಿದೆ.
ಇದರಿಂದ ಕಬ್ಬು ಬೆಳಗಾರರ ಆರ್ಥಿಕ ಸ್ಥಿತಿ ಸುಧಾರಿಸಲು ಅನುಕೂಲವಾಗಲಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ. 2023-24ನೇ ಸಾಲಿನಲ್ಲಿ ಕಬ್ಬು ನುರಿಸುವ ಹಂಗಾಮು ಆರಂಭಕ್ಕೆ 20 ದಿನ ಮಾತ್ರ ಬಾಕಿಯಿದೆ. 2023-24ರ ಸಕ್ಕರೆ ಹಂಗಾಮಿಗೆ ನಿಗದಿಪಡಿಸಿರುವ ಎಫ್​ಆರ್​ಪಿಯು ಕಳೆದ ಸಾಲಿನ (2022-23ರ) ಸಕ್ಕರೆ ಹಂಗಾಮಿಗಿಂತ ಶೇ.3.28 ಅಧಿಕವಾಗಿದೆ. ಸಕ್ಕರೆ ವಲಯವು ದೇಶದ ಪ್ರಮುಖ ಕೃಷಿ ಆಧಾರಿತ ವಲಯವಾಗಿದೆ. ಇದು ದೇಶದ 5 ಕೋಟಿ ಕಬ್ಬು ಬೆಳೆಗಾರರು ಮತ್ತು ಅವರ ಅವಲಂಬಿತರು ಮತ್ತು ಸಕ್ಕರೆ ಕಾರ್ಖಾನೆಗಳಲ್ಲಿ ನೇರವಾಗಿ ಕಾರ್ಯನಿರ್ವಹಿಸುವ ಅಂದಾಜು 5 ಲಕ್ಷ ಕಾರ್ವಿುಕರ ಜೀವನೋಪಾಯದ ಮೇಲೆ ಪರಿಣಾಮ ಬೀರಲಿದೆ. ಆದರೆ, ರಾಜ್ಯ ಸರ್ಕಾರದ ಸಕ್ಕರೆ ಇಲಾಖೆ ಕಬ್ಬು ಅಭಿವೃದ್ಧಿ ಆಯುಕ್ತರು ಸಕ್ಕರೆ ಕಾರ್ಖಾನೆಗಳ ರಿಕವರಿ ಆಧಾರದ ಮೇಲೆ ಎಫ್​ಆರ್​ಪಿ ನಿಗದಿ ಮಾಡುವುದು ಇನ್ನೂ ನೆನೆಗುದಿಗೆ ಬಿದ್ದಿದೆ.
ಬಾಕಿ ಬಿಲ್ ಪಾವತಿ: ಕಳೆದ ವರ್ಷ ಕಬ್ಬು ನುರಿಸುವ ಹಂಗಾಮಿನಲ್ಲಿ (2022-23) ಕಬ್ಬು ನುರಿಸಿದ್ದ ರಾಜ್ಯದ 74 ಸಕ್ಕರೆ ಕಾರ್ಖಾನೆಗಳು ಆ.15ರವರೆಗೆ 20,080.65 ಸಾವಿರ ಕೋಟಿ ರೂ. ಬಿಲ್ ಪಾವತಿಸಿವೆ ಎಂದು ಇಲಾಖೆ ಮೂಲಗಳು ತಿಳಿಸಿವೆ. ಕಳೆದ ಕಬ್ಬು ನುರಿಸುವ ಹಂಗಾಮಿನಲ್ಲಿ 6.03 ಕೋಟಿ ಮೆಟ್ರಿಕ್ ಟನ್ ಕಬ್ಬು ನುರಿಸಿ, 59 ಲಕ್ಷ ಮೆಟ್ರಿಕ್ ಟನ್ ಸಕ್ಕರೆ ಉತ್ಪಾದಿಸಿದ್ದವು. ಎಲ್ಲ ಕಾರ್ಖಾನೆಗಳು ಸೇರಿ ರಾಜ್ಯದ ಸಕ್ಕರೆ ಸರಾಸರಿ ಇಳುವರಿ 9.91 ಇದೆ. ಸಕ್ಕರೆ ಇಲಾಖೆಯ ಅಧಿಕಾರಿಗಳು ಹೇಳುವ ಪ್ರಕಾರ ಬಹುತೇಕ ಸಕ್ಕರೆ ಕಾರ್ಖಾನೆಗಳು ಎಫ್​ಆರ್​ಪಿ ಪಾವತಿ ಮಾಡಿವೆ. ಆದರೆ ವಿಜಯಪುರ ಜಿಲ್ಲೆಯ ಕಾರಜೋಳ ಗ್ರಾಮದಲ್ಲಿ ಶ್ರೀ ಬಸವೇಶ್ವರ ಶುಗರ್ಸ್ ಲಿ. ಸಕ್ಕರೆ ಕಾರ್ಖಾನೆ ಇನ್ನೂ 7.60 ಕೋಟಿ ರೂ. ಮೊತ್ತದ ಬಿಲ್ ಪಾವತಿ ಮಾಡಿರುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ರಾಜ್ಯದ ಸರ್ಕಾರ ಸಕ್ಕರೆ ಇಲಾಖೆಯ ಉನ್ನತ ಅಧಿಕಾರಿಗಳು ಶೀಘ್ರದಲ್ಲಿಯೇ ಎಫ್​ಆರ್​ಪಿ ನಿಗದಿ ಪಡಿಸುವುದಕ್ಕಾಗಿ ಸಭೆ ಕರೆಯುವ ಸಾಧ್ಯತೆಯಿದೆ. ಆಗ ರಾಜ್ಯದ ಸಕ್ಕರೆ ಕಾರ್ಖಾನೆಗಳು ಕಳೆದ ಹಂಗಾಮಿನಲ್ಲಿ ಕಬ್ಬು ನುರಿಸಿದ ಇಳುವರಿ ಆಧಾರದ ಮೇಲೆ ಎಫ್​ಆರ್​ಪಿ ನಿಗದಿಪಡಿಸಲಾಗುತ್ತದೆ.
| ಡಾ.ಆರ್.ಬಿ.ಖಾಂಡಗಾವೆ, ನಿರ್ದೇಶಕ, ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಬೆಳಗಾವಿ
ಕಾರ್ಖಾನೆಗಳಿಗೆ ಆರ್ಥಿಕ ನೆರವು:ಬ್ಯಾಂಕ್ ಸಾಲದ ಮೂಲಕ ಸಕ್ಕರೆ ಕಾರ್ಖಾನೆಗಳಲ್ಲಿ ಎಥೆನಾಲ್ ಘಟಕ ಅಳವಡಿಸಿಕೊಳ್ಳವವರಿಗೆ ಶೇ.6 ಬಡ್ಡಿಯನ್ನು ಕೇಂದ್ರ ಸರ್ಕಾರವೇ ಭರಿಸಲಿದೆ. ಜತೆಗೆ ಬಯೋಗ್ಯಾಸ್​ನಿಂದ ವಿದ್ಯುತ್ ಉತ್ಪಾದನೆ ಸೇರಿ ಕಬ್ಬಿನ ಉಳಿದ ಉಪ ಉತ್ಪನ್ನಗಳಿಂದ ಕಾರ್ಖಾನೆಗಳಿಗೆ ಮೊದಲಿಗಿಂತಲೂ ಆರ್ಥಿಕ ಆದಾಯ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ.
‘ಡಾಕ್ಟರ್​ ಬ್ರೋ’ ಈಗ ಮ್ಯಾನ್ ಆಫ್ ಮಿಲಿಯನ್ಸ್​; ಯೂ-ಟ್ಯೂಬ್​ ಒಂದರಲ್ಲೇ 2 ಮಿಲಿಯನ್​ ಸಬ್​​ಸ್ಕ್ರೈಬರ್ಸ್​!

ಮುಂದಿನ ಜನವರಿಯಲ್ಲೇ ಅಯೋಧ್ಯೆ ರಾಮಮಂದಿರ ಉದ್ಘಾಟನೆ; ದಿನಾಂಕವೂ ನಿಗದಿ, ಇಲ್ಲಿದೆ ವಿವರ..

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two × 2 =
Remember me
