ಚಾಮರಾಜನಗರ:ಚಾಮರಾಜನಗರ ಜಿಲ್ಲೆ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಸಂಭವಿಸಿದ್ದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು 33 ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರ ಪೈಕಿ 20 ಮಹಿಳೆಯರು 13 ಪುರುಷರಿದ್ದು, ಮಹದೇಶ್ವರ ಬೆಟ್ಟದ ಪೊಲೀಸ್‌ ಠಾಣೆಯಲ್ಲಿ ಪ್ರತ್ಯೇಕವಾಗಿ ಮೂರು ಪ್ರಕರಣಗಳು ದಾಖಲಾಗಿದ್ದವು. ಎರಡು ಪ್ರಕರಣಗಳಲ್ಲಿ ಕ್ರಮವಾಗಿ 41 ಮತ್ತು 33 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೆಂದಾರೆ ಗ್ರಾಮದ ಗಿರಿಜನ ಮುಖಂಡರು ನೀಡಿರುವ ದೂರಿನ ಆಧಾರದ ಮೇರೆಗೆ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:ಲೋಕಸಭೆ ಚುನಾವಣೆ; ಉಗ್ರ ಕಸಬ್​ನನ್ನು ಗಲ್ಲಿಗೇರಿಸುವಂತೆ ವಾದ ಮಂಡಿಸಿದ್ದ ವಕೀಲನಿಗೆ ಟಿಕೆಟ್ ನೀಡಿದ ಬಿಜೆಪಿ
ಹಲವು ವರ್ಷಗಳಿಂದ ತಮ್ಮ ಗ್ರಾಮಕ್ಕೆ ಮೂಲಬೂತ ಸೌಕರ್ಯಗಳನ್ನು ಜನಪ್ರತಿನಿಧಿಗಳು ಒದಗಿಸಿಲ್ಲ ಎಂದು ಆರೋಪಿಸಿ ಇಂಡಿಗನತ್ತ ಗ್ರಾಮಸ್ಥರು ಮತದಾನವನ್ನು ಬಹಿಷ್ಕರಿಸಿದ್ದರು. ವಿಚಾರ ತಿಳಿದು ಸ್ಥಳಕ್ಕೆ ತೆರಳಿದ ತಹಸೀಲ್ದಾರ್, ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳ ತಂಡ ಗ್ರಾಮಸ್ಥರ ಮನವೊಲಿಸಲು ಮುಂದಾಗಿದ್ದು, ಮತದಾನ ಮಾಡುವಂತೆ ಒತ್ತಾಯಿಸಿದ್ದಾರೆ.
ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ತಹಸೀಲ್ದಾರ್, ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿ ಮತಯಂತ್ರವನ್ನು ಧ್ವಂಸ ಮಾಡಿ ಬೆಂಕಿಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಅಧಿಕಾರಿಗಳು ನೀಡಿದ ದೂರನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ 33 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇನ್ನುಳಿದಿರುವವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
