ಬೆಂಗಳೂರು:ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33 ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳನ್ನು ಪರಿಗಣಿಸಬೇಕೆಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್ ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿದೆ.
ಇದೇ ವೇಳೆ ಮಹಿಳೆಯರ ಸಬಲೀಕರಣ ಮತ್ತು ಅವರಿಗೆ ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶ ಒದಗಿಸುವ ದೃಷ್ಟಿಯಿಂದ ರಾಜ್ಯ ಸಿವಿಲ್ ಸೇವೆಗಳಲ್ಲಿ ಶೇ.33ರಷ್ಟು ನೇರ ನೇಮಕಾತಿ ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.
ಹೊರಗುತ್ತಿಗೆ ಮುಖಾಂತರ ಪಡೆಯಲಾಗುವ ಸೇವೆಗಳನ್ನು ಮಹಿಳೆಯರು ಕೂಡ ಸಮರ್ಥರಾಗಿ ನಿರ್ವಹಿಸಬಲ್ಲವರಾಗಿರುತ್ತಾರೆ. ಹೀಗಾಗಿ ಹೊರಗುತ್ತಿಗೆ ಮುಖಾಂತರ ಪಡೆಯಲಾಗುವ ಸೇವೆಗಳಲ್ಲಿ ಹಾಗೂ ಹುದ್ದೆಗಳಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿ ಗಳಿಂದ ಭರ್ತಿ ಮಾಡಿಕೊಳ್ಳುವಂತೆ ಎಲ್ಲಾ ಇಲಾಖೆಗಳಿಗೆ ಈ ಮೂಲಕ ಸೂಚನೆ ನೀಡಲಾಗಿದೆ.
ಒಪ್ಪಂದದಲ್ಲಿ ಸೇರ್ಪಡೆ:ಡಾಟಾ ಎಂಟ್ರಿ ಆಪರೇಟರ್, ಗ್ರೂಪ್-ಡಿ. ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಪಡೆಯುವ ಟೆಂಡರ್ ಪ್ರಕಟಣೆಯಲ್ಲಿ, ಹೊರಗುತ್ತಿಗೆ ಏಜೆನ್ಸಿಗಳೊಂದಿಗೆ ಮಾಡಿಕೊಳ್ಳಲಾಗುವ ಒಪ್ಪಂದದಲ್ಲಿ ಈ ಅಂಶವನ್ನು ಸೇರಿಸಲು ಸಂಬಂಧಪಟ್ಟ ಟೆಂಡರ್ ಆಹ್ವಾನಿಸುವ ಪ್ರಾಧಿಕಾರಗಳು ಕ್ರಮವಹಿಸುವಂತೆ ಸೂಚಿಸಲಾಗಿದೆ. ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಇನ್ನಿತರೆ ಸರ್ಕಾರಿ ವಲಯದ ಅಂಗ ಸಂಸ್ಥೆಗಳು ಕೂಡ ಈ ನಿಯಮ ಪಾಲಿಸಬೇಕು. ಎಲ್ಲಾ ಆಡಳಿತ ಇಲಾಖೆಗಳ ಕಾರ್ಯದರ್ಶಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಕ್ಷೇತ್ರ ಇಲಾಖೆಗಳು ಮತ್ತು ಅಂಗಸಂಸ್ಥೆಗಳಿಗೆ ಅಗತ್ಯ ಸೂಚನೆಗ್ಗಳನ್ನು ನೀಡಬೇಕೆಂದು ಮುಖ್ಯಕಾರ್ಯದರ್ಶಿ ಸೂಚಿಸಿದ್ದಾರೆ.
ಕಟ್ಟುಮಸ್ತಾದ ಯುವಕ ಸಾವಿಗೆ ಶರಣು; ಮನೆಯಲ್ಲೇ ಆತ್ಮಹತ್ಯೆ, ಕಾರಣ ನಿಗೂಢ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + eight =
Remember me
