ಬೆಂಗಳೂರು:ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗುತ್ತಿರುವುದನ್ನು ಮಾಜಿ ಸಿಎಂ ಕುಮಾರಸ್ವಾಮಿ ಮುಕ್ತವಾಗಿ ಸ್ವಾಗತಿಸಿದ್ದಾರೆ.
ದೇವೇಗೌಡರು ಪ್ರಧಾನಮಂತ್ರಿಗಳಾಗಿದ್ದ ಸಂದರ್ಭದಲ್ಲಿಯೇ ಸೆ. 12, 1996 ರಂದು ರಾಜ್ಯಸಭೆಯಲ್ಲಿ ಈ ಐತಿಹಾಸಿಕ ಬಿಲ್ ಅನ್ನು ಮಂಡಿಸಲಾಗಿತ್ತು. ಆದರೆ, ಅವರ ಸಂಯುಕ್ತರಂಗ ಸರ್ಕಾರದ ಮೈತ್ರಿಕೂಟದ ಕೆಲ ಮಿತ್ರಪಕ್ಷಗಳೇ ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಆ ಮಸೂದೆ ಅಂಗೀಕಾರ ಆಗಲಿಲ್ಲ. ಇವತ್ತು ಕಾಂಗ್ರೆಸ್ಸಿನ ಇಂಡಿಯಾ ಮೈತ್ರಿಕೂಟವನ್ನು ಸೇರಿಕೊಂಡಿರುವ ನಾಯಕರೇ ಅಂದು ಈ ಮಸೂದೆಗೆ ತಡೆ ಒಡ್ಡಿದ್ದರು.
27 ವರ್ಷಗಳ ನಂತರ ದೇವೇಗೌಡರ ಕನಸಿಗೆ ಮರುಜೀವ ಬಂದಿರುವುದು ನನಗೆ ಸಂತೋಷ ಉಂಟು ಮಾಡಿದೆ ಎಂದು ಹೇಳಿದ್ದಾರೆ.
1995ರಲ್ಲಿ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲು ನೀಡಿ, ಅಧಿಕಾರ ನಡೆಸುವ ಹಕ್ಕು ಕಲ್ಪಿಸಿ ಮಹಿಳಾ ಸಬಲೀಕರಣದ ಸುವರ್ಣ ಅಧ್ಯಾಯಕ್ಕೆ ನಾಂದಿ ಹಾಡಿದ್ದರು. ಅಂದು ನಮ್ಮ ರಾಜ್ಯದಲ್ಲಿ ಘಟಿಸಿದ ಈ ಕ್ರಾಂತಿಕಾರಿ ವಿದ್ಯಮಾನವನ್ನು ಇಡೀ ದೇಶವೇ ಬೆರಗು ಕಂಗಳಿಂದ ನೋಡಿತ್ತು.ಇಂದು ಮಹಿಳಾ ಮೀಸಲು ಮಸೂದೆ ಲೋಕಸಭೆಯಲ್ಲಿ ಅಂಗೀಕಾರ ಆಗುವುದು ಖಚಿತವಾಗಿದ್ದು, ಈ ಮೂಲಕ ಮಾಜಿ ಪ್ರಧಾನಿಗಳ ಕನಸು ನನಸಾಗುತ್ತಿದೆ.
ಮಹಿಳೆಯರಿಗೆ ಸಮಾನ ಹಕ್ಕು, ಅವಕಾಶಗಳನ್ನು ಕಲ್ಪಿಸುವುದು ಇಂದಿನ ತುರ್ತು ಎಂದು ಪ್ರತಿಪಾದಿಸಿದ್ದಾರೆ.ಪ್ರಧಾನಿ ಮೋದಿ ಮತ್ತವರ ಸಂಪುಟ ಕೈಗೊಂಡ ನಿರ್ಧಾರ ಶ್ಲಾಘನೀಯ. ರಾಜಕೀಯಕ್ಕೆ ಅತೀತವಾಗಿ ಈ ಮಸೂದೆಯನ್ನು ಎಲ್ಲ ಪಕ್ಷಗಳು ಬೆಂಬಲಿಸಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 4 =
Remember me
