ಬೆಂಗಳೂರು: ದಿನದಿಂದ ದಿನಕ್ಕೆ ಕೊವಿಡ್​-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್​ಗಳು ಸಾಕಾಗುತ್ತಿಲ್ಲ. ಹಾಗಾಗಿ ಕಳೆದ ವಾರ ಮುಖ್ಯಮಂತ್ರಿ ಯಡಿಯೂರಪ್ಪನವರು ಖಾಸಗಿ ಆಸ್ಪತ್ರೆ ಮಾಲೀಕರೊಂದಿಗೆ ಸಭೆ ನಡೆಸಿ, ಬೆಡ್​ಗಳ ವ್ಯವಸ್ಥೆ ಮಾಡುವಂತೆ ಕೇಳಿದ್ದರು. ಅದೀಗ ಸಾಕಾರಗೊಂಡಿದೆ.
ಒಟ್ಟು 72 ಖಾಸಗಿ ಆಸ್ಪತ್ರೆಗಳಿಂದ ಒಟ್ಟು 3331 ಹಾಸಿಗೆಗಳನ್ನು ಕೊವಿಡ್​-19 ಸೋಂಕಿತರಿಗಾಗಿ ಮೀಸಲಿಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್​ ತಿಳಿಸಿದ್ದಾರೆ. ಟ್ವೀಟ್​ ಮಾಡಿರುವ ಅವರು, ಬೆಂಗಳೂರು ನಗರಾದ್ಯಂತ ಒಟ್ಟು 72 ಆಸ್ಪತ್ರೆಗಳಲ್ಲಿ 3331 ಹಾಸಿಗೆಗಳನ್ನು ಕರೊನಾ ರೋಗಿಗಳ ಚಿಕಿತ್ಸೆಗಾಗಿ ಮೀಸಲಿಡಲಾಗಿದೆ. ಶನಿವಾರ ಸಂಜೆಯವರೆಗೆ 733 ಹಾಸಿಗೆಗಳು ಭರ್ತಿಯಾಗಿದ್ದು, ಇನ್ನೂ 2598 ಹಾಸಿಗೆಗಳು ಅಂದರೆ ಶೇ.78 ಹಾಸಿಗೆಗಳು ಖಾಲಿ ಎಂದು ಸ್ಪಷ್ಟಪಡಿಸಿದ್ದಾರೆ.ಇದನ್ನೂ ಓದಿ:‘ಕೇಂದ್ರ ಸರ್ಕಾರಕ್ಕೆ ಟಾರ್ಗೆಟ್​ ಚೀನಾ ಅಲ್ಲ…ಏನಿದ್ದರೂ ಕಾಂಗ್ರೆಸ್​ ಮೇಲೆ ಕಣ್ಣು…’
ಇತ್ತೀಚೆಗೆ ಕರೊನಾ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಬೆಡ್​ಗಳ ಕೊರತೆಯ ಆತಂಕ ಎದುರಾಗಿತ್ತು. ಈ ಮಧ್ಯೆ ಸೋಂಕು ತಗುಲಿದ್ದರೂ ಯಾವುದೇ ಲಕ್ಷಣಗಳು ಇಲ್ಲದೆ ಇರುವವರಿಗೆ ಮನೆಯಲ್ಲೇ ಕ್ವಾರಂಟೈನ್​ನಲ್ಲಿದ್ದು ಚಿಕಿತ್ಸೆ ಪಡೆಯುವುದಕ್ಕೂ ರಾಜ್ಯ ಸರ್ಕಾರ ಅಸ್ತು ಎಂದಿದೆ. (ಏಜೆನ್ಸೀಸ್​)



ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 + 14 =
Remember me
