ಬೆಂಗಳೂರು:ರಾಜ್ಯದಲ್ಲಿ ಕರೊನಾ ಹೆಮ್ಮಾರಿ ದಿನದಿಂದ ದಿನಕ್ಕೆ ತನ್ನ ಕರಾಳ ರೂಪ ತೋರುತ್ತಿದೆ. ಪ್ರತಿದಿನವೂ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರುತ್ತಲೇ ಇದ್ದು, ಮನೆಯ ಒಳಗಡೆಯೇ ಸುರಕ್ಷಿತವಾಗಿ ಇರುವಂತೆ ಜನರಿಗೆ ಎಚ್ಚರಿಕೆಯ ಗಂಟೆ ಬಾರಿಸುತ್ತಿದೆ.
ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ, ಅಂದರೆ ಕೆಲವೇ ಗಂಟೆಗಳಲ್ಲಿ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 34 ಹೆಚ್ಚಳವಾಗಿದೆ! ನಿನ್ನೆ ಒಂದೇ ದಿನ ಇಬ್ಬರು ಸೋಂಕಿಗೆ ಬಲಿಯಾಗಿದ್ದರೆ, ಇಂದು ಈಗಾಗಲೇ ವೈರಸ್‌ ಇನ್ನೊಬ್ಬ ವ್ಯಕ್ತಿಯನ್ನು ಬಲಿ ಪಡೆದಿದೆ. ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿದೆ. ಸೋಂಕಿತರ ಸಂಖ್ಯೆ 313 ಆಗಿದ್ದು, 82 ಮಂದಿ ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಒಂದೇ ದಿನ 8 ಸೋಂಕಿತರು ಪತ್ತೆಯಾಗಿದ್ದು, ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ಮತ್ತು ವಿಜಯಪುರದಲ್ಲಿ ತಲಾ ಏಳು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಉಳಿದಂತೆ ಬೆಂಗಳೂರು ನಗರ 5, ಮೈಸೂರು 3, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಬೆಳಗಾವಿ, ಕಲಬುರಗಿ ಹಾಗೂ ಗದಗ ತಲಾ ಒಂದು ಪ್ರಕರಣಗಳು ಹೊಸದಾಗಿ ಪತ್ತೆಯಾಗಿವೆ.
ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್‌ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
VIDEO: ಲಾಕ್​ಡೌನ್ ಪಾಲನೆಗೆ ಈ ರೀತಿ ಲಾಠಿ ಬೀಸುವ ಅಧಿಕಾರ ಆರೋಗ್ಯ ಇಲಾಖೆ ಅಧಿಕಾರಿಗೂ ಇದೆಯಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + sixteen =
Remember me
