ಬೆಂಗಳೂರುಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್‌ನ 384 ಹುದ್ದೆಗಳನ್ನು (ಗ್ರೂಪ್ ಎ ಮತ್ತು ಬಿ) ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.
ಗ್ರೂಪ್ ‘ಎ’ನಲ್ಲಿ 159 ಹುದ್ದೆಗಳು ಮತ್ತು ಗ್ರೂಪ್ ‘ಬಿ’225 ಹುದ್ದೆಗಳು ಸೇರಿ 384 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಸಂಬಂಧ ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಾ.4ರಿಂದ ಏ.3ರ ಅವಧಿಯಲ್ಲಿ ಅರ್ಜಿ ಸಲ್ಲಿಸಬಹುದು. ಮೇ 5ರಂದು ಪೂರ್ವಭಾವಿ ಪರೀಕ್ಷೆ ನಡೆಸುವುದಾಗಿ ಅಧಿಸೂಚನೆಯಲ್ಲಿ ಪ್ರಕಟಿಸಿದೆ.
ಗ್ರೂಪ್ ‘ಎ’ 159 ಹುದ್ದೆಗಳು:
ಸಹಾಯಕ ಆಯುಕ್ತ (ಕಿರಿಯ ಶ್ರೇಣಿ) ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ- 40 ಹುದ್ದೆಗಳು, ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತ-41, ಸಹಾಯಕ ನಿರ್ದೇಶಕ ಖಜಾನೆ ಇಲಾಖೆ- 02, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಕಾರ್ಯನಿರ್ವಾಹಕ ನಿರ್ದೇಶಕ ಅಧಿಕಾರಿ/ಸಹಾಯಕ ಕಾರ್ಯದರ್ಶಿ- 40, ಒಳಾಡಳಿತ ಡಿವೈಎಸ್ಪಿ- 9, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗ್ರೇಡ್-1- 20, ಹಿಂದುಳಿದ ವರ್ಗಗಳ ಕಲ್ಯಾಣದ ಜಿಲ್ಲಾ ಕಲ್ಯಾಣಾಧಿಕಾರಿ/ಸಹಾಯಕ ನಿರ್ದೇಶಕ/ಪ್ರಾಂಶುಪಾಲ- 7 ಹುದ್ದೆ.
ಗ್ರೂಪ್ ‘ಬಿ’ ಹುದ್ದೆಗಳು:
ಕಂದಾಯ ಇಲಾಖೆ ತಹಶೀಲ್ದಾರ್ (ಗ್ರೇಡ್-2)- 51, ವಾಣಿಜ್ಯ ತೆರಿಗೆ ಅಧಿಕಾರಿ- 59, ಕಾರ್ಮಿಕ ಅಧಿಕಾರಿ- 4, ಒಳಾಡಳಿತ ಇಲಾಖೆ (ಕಾರಾಗೃಹ) ಸಹಾಯಕ ಅಧೀಕ್ಷಕ- 3, ಸಹಕಾರ ಇಲಾಖೆಯ ಸಹಕಾರ ಸಂಘಗಳ ಸಹಾಯಕ ನಿಬಂಧಕ-12, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ ಸಹಾಯಕ ನಿರ್ದೇಶಕ-9, ಆರ್ಥಿಕ ಇಲಾಖೆ (ಅಬಕಾರಿ) ಅಬಕಾರಿ ಉಪ ಅಧೀಕ್ಷಕ-10, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಉದ್ಯೋಗಾಧಿಕಾರಿ-3, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ- 4, ನಗರಾಭಿವೃದ್ಧಿ ಇಲಾಖೆ ಮುಖ್ಯಾಧಿಕಾರಿ (ಗ್ರೇಡ್-1)-1, ಆರ್ಥಿಕ ಇಲಾಖೆ (ಖಜಾನೆ) ಸಹಾಯಕ ಖಜಾನಾಧಿಕಾರಿ-46, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಹಾಯಕ ನಿರ್ದೇಶಕ- 9, ಪ್ರವಾಸೋದ್ಯಮ ಸಹಾಯಕ ನಿರ್ದೇಶಕ-2, ಸರ್ಕಾರದ ಸಚಿವಾಲಯ ಶಾಖಾಧಿಕಾರಿ- 5, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ (ಗ್ರೇಡ್-2)- 07 ಹುದ್ದೆಗಳು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + five =
Remember me
