ಬೆಂಗಳೂರು: ರಾಜ್ಯದಲ್ಲಿ 3,935 ಕೋಟಿ ರೂ.ಗೂ ಹೆಚ್ಚಿನ ಹೂಡಿಕೆಯಾಗಲಿರುವ ಒಟ್ಟು 73 ಯೋಜನಾ ಪ್ರಸ್ತಾವನೆಗಳಿಗೆ ಶುಕ್ರವಾರ ನಡೆದ ಏಕಗವಾಕ್ಷಿ ಅನುಮೋದನಾ ಸಮಿತಿ ಒಪ್ಪಿಗೆ ಸೂಚಿಸಿದ್ದು, ಇದರಿಂದ 14,497 ಉದ್ಯೋಗಾವಕಾಶ ಸೃಷ್ಟಿಯಾಗಲಿವೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.
ಸಭೆಯ ಬಳಿಕ ಮಾತನಾಡಿದ ಅವರು, ಅನುಮೋದನೆ ನೀಡಿರುವ ಯೋಜನೆಗಳ ಪೈಕಿ 10 ಯೋಜನೆಗಳಲ್ಲಿ ತಲಾ 50 ಕೋಟಿ ರೂ.ಗೂ ಹೆಚ್ಚು ಹೂಡಿಕೆ ಆಗಲಿದೆ. ಈ ಯೋಜನೆಗಳಲ್ಲಿ ಇಟಿಎಲ್ ಸೆಕ್ಯೂರ್ ಸ್ಪೇಸ್, ದಶ ಪಿ.ವಿ.ಟೆಕ್ನಾಲಜೀಸ್, ಮೈಲಾರ್ ಇನ್ಫ್ರಾ, ಸ್ಯಾಂಗೋ ಆಟೋಮೋಟೀವ್ ಪಾರ್ಟ್ಸ್, ವೇನಾಸ್ ಲ್ಯಾಬ್ಸ್, ಸಿಂಬಯೋ ಜನರಿಕ್ಸ್ ಇಂಡಿಯಾ, ಎಂಎಎ್ ಕ್ಲಾತಿಂಗ್, ಎಸ್‌ಎಎ ಪ್ರಾಕ್ಟ್, ನಿಫ್ರೋ ಸೌತ್ ಇಂಡಿಯಾ ಮ್ಯಾನಫ್ಯಾಕ್ಚರಿಂಗ್ ಮತ್ತು ರೆನ್ಸ್ ಬಯೋಟೆಕ್ ಕಂಪನಿಗಳು ಸೇರಿವೆ ಎಂದರು.
ಈ ಕಂಪನಿಗಳು ದೇವನಹಳ್ಳಿ, ಶಿರಾ ಕೈಗಾರಿಕಾ ಪ್ರದೇಶ, ಹೂವಿನಹಡಗಲಿ, ರಾಮನಗರ, ಕಡೇಚೂರು, ಚಾಮರಾಜನಗರ, ಗೌರಿಬಿದನೂರು ಮತ್ತು ತುಮಕೂರಿನ ವಸಂತ ನರಸಾಪುರಗಳಲ್ಲಿ ಹೂಡಿಕೆ ಮಾಡಲಿದ್ದು, ಒಟ್ಟು 9,200 ಉದ್ಯೋಗಗಳನ್ನು ಸೃಷ್ಟಿಸಲಿವೆ. ಮೇಲ್ಕಂಡ ಉದ್ದಿಮೆಗಳು ಕನಿಷ್ಟ 96 ಕೋಟಿ ರೂ.ಗಳಿಂದ ಗರಿಷ್ಠ 490.50 ಕೋಟಿ ರೂ.ವರೆಗೂ ಬಂಡವಾಳ ತೊಡಗಿಸಲಿವೆ ಎಂದು ಮಾಹಿತಿ ನೀಡಿದ್ದಾರೆ.
ಕನಿಷ್ಠ 15 ಕೋಟಿ ರೂ.ಗಳಿಂದ ಹಿಡಿದು ಗರಿಷ್ಠ 50 ಕೋಟಿ ರೂ.ವರೆಗೂ ಹೂಡಿಕೆ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದ 59 ಹೊಸ ಯೋಜನೆಗಳಿಗೂ ಒಪ್ಪಿಗೆ ನೀಡಲಾಗಿದೆ. ಇದರಿಂದ 5,297 ಮಂದಿಗೆ ಉದ್ಯೋಗ ಸಿಗಲಿದೆ. ಜತೆಗೆ ಹೆಚ್ಚುವರಿ ಬಂಡವಾಳ ಹೂಡಿಕೆಯ 5 ಯೋಜನೆಗಳಿಗೂ ಅನುಮೋದನೆ ಕೊಟ್ಟಿದ್ದು, ಇದರಿಂದ 87.67 ಕೋಟಿ ರೂ. ಬಂಡವಾಳ ರಾಜ್ಯಕ್ಕೆ ಹರಿದು ಬರಲಿದೆ ಎಂದು ಪಾಟೀಲ ವಿವರಿಸಿದ್ದಾರೆ.
ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ವ್ಯವಸ್ಥಾಪಕ ನಿರ್ದೇಶಕ ಡಾ.ಮಹೇಶ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 20 =
Remember me
