ಬೆಂಗಳೂರು:ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಸೆಲ್‌ಲಿಂಕ್‌ ಕಂಪನಿಗಳ ಸಹಯೋಗದಲ್ಲಿ ಐಐಎಸ್ಸಿಯಲ್ಲಿ ಸ್ಥಾಪಿಸಿರುವ ಭಾರತದ ಪ್ರಪ್ರಥಮ 3ಡಿ ಬಯೋಪ್ರಿಂಟಿಂಗ್‌ ಉತ್ಕೃಷ್ಟತಾ ಕೇಂದ್ರವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಅವರು ಶುಕ್ರವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವೈದ್ಯಕೀಯ ಮತ್ತು ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ಈಗ ಅಂಗಾಂಶಗಳು ಮತ್ತು ಜೀವಕೋಶಗಳನ್ನು ಆಧರಿಸಿದ ಚಿಕಿತ್ಸೆಗಳು ಮುಂಚೂಣಿಗೆ ಬರುತ್ತಿದ್ದು, ಇವು ಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿವೆ. ಮುಂಬರುವ ವರ್ಷಗಳಲ್ಲಿ ಆಯಾ ವ್ಯಕ್ತಿಗಳ ಶರೀರ ಸ್ವಭಾವವನ್ನು ಆಧರಿಸಿ, ರೋಗಗಳನ್ನು ಗುಣಪಡಿಸುವತಹ ನಿರ್ದಿಷ್ಟ ಬಗೆಯ ಚಿಕಿತ್ಸಾ ಕ್ರಮಗಳು ಜನಪ್ರಿಯವಾಗಲಿದೆ. ಇದರಲ್ಲಿ 3ಡಿ ಬಯೋಪ್ರಿಂಟಿಂಗ್‌ ಮಹತ್ತರ ಪಾತ್ರ ವಹಿಸಲಿದೆ ಎಂದರು.
ಈ ಉತ್ಕೃಷ್ಟತಾ ಕೇಂದ್ರವು ಆಧುನಿಕ ಚಿಕಿತ್ಸಾ ಕ್ರಮಗಳಿಗೆ ಸಂಬಂಧಿಸಿದ ಸಂಶೋಧನಾ ಉಪಕ್ರಮಗಳನ್ನು ಪರಿಚಯಿಸಲಿದೆ. ಜತೆಗೆ ಆರೋಗ್ಯಸೇವೆಗಳ ಕ್ಷೇತ್ರದಲ್ಲಿರುವ ವೃತ್ತಿಪರರು ಹಾಗೂ ಉಳಿದವರಿಗೆ ವೈಜ್ಞಾನಿಕ ತರಬೇತಿ ಇಲ್ಲಿ ಸಿಗಲಿದೆ. 3ಡಿ ಬಯೋಪ್ರಿಂಟಿಂಗ್‌ ತಂತ್ರಜ್ಞಾನದ ಬಳಕೆಯನ್ನು ಪ್ರಚುರಪಡಿಸಲು ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಅಗತ್ಯವಿರುವ ಉಳಿದೆಡೆಗಳಲ್ಲಿ ಕಾರ್ಯಾಗಾರಗಳನ್ನು ಕೂಡ ಈ ಕೇಂದ್ರವು ಹಮ್ಮಿಕೊಳ್ಳಲಿದೆ ಎಂದು ಅವರು ತಿಳಿಸಿದರು.
ಜೈವಿಕ ತಂತ್ರಜ್ಞಾನ, ಸಂಶೋಧನೆ ಮತ್ತು ಅಭಿವೃದ್ಧಿಗಳ ರಾಜಧಾನಿಯಾಗಿ ಬೆಂಗಳೂರು ಪ್ರತಿಷ್ಠಾಪಿತವಾಗಿದೆ. ಈ ಉತ್ಕೃಷ್ಟತಾ ಕೇಂದ್ರದಲ್ಲಿ ಟಿಶ್ಯೂ ಎಂಜಿನಿಯರಿಂಗ್‌, ಔಷಧಗಳ ಆವಿಷ್ಕಾರ, ಮೆಟೀರಿಯಲ್‌ ಸೈನ್ಸ್‌ನ ಬೆಳವಣಿಗೆ ಸುಗಮವಾಗಿ ನಡೆಯಲಿದೆ. ಇದರಿಂದಾಗಿ ದೇಶದ ಆರೋಗ್ಯಸೇವೆಗಳ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಾಗಲಿವೆ. ಇದರಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ಬಯೋಸಿಸ್ಟಮ್ಸ್ ಸೈನ್ಸ್ ಅಂಡ್‌ ಎಂಜಿನಿಯರಿಂಗ್‌ ಕೇಂದ್ರವು ಸಕ್ರಿಯ ಪಾತ್ರ ವಹಿಸಲಿದೆ ಎಂದು ಸಚಿವರು ನುಡಿದರು.
ಕಾರ್ಯಕ್ರಮದಲ್ಲಿ ಐಐಎಸ್ಸಿ ನಿರ್ದೇಶಕ ಪ್ರೊ.ಗೋವಿಂದನ್ ರಂಗರಾಜನ್‌, ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಯ ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ.ವಿಶಾಲ್‌ ರಾವ್‌, ಸೆಲ್‌ಲಿಂಕ್‌ ಕಂಪನಿಯ ಏಷ್ಯಾ-ಪೆಸಿಫಿಕ್‌ ಮುಖ್ಯಸ್ಥೆ ಟೊಮೋಕೊ ಬೈಲುಂಡ್‌, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರೂಪಕ್‌ ಪೊದ್ದಾರ್‍‌ ಉಪಸ್ಥಿತರಿದ್ದರು.
ನಿಮ್ಮ ಕಣ್ಣಿಗೊಂದು ಸವಾಲು: ಸಾಧ್ಯವಾದ್ರೆ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರುವ ಕಾಡುಬೆಕ್ಕನ್ನು ಗುರುತಿಸಿ!

ಮದ್ವೆಯಾದ ಎರಡೇ ತಿಂಗಳಿಗೆ ನವವಿವಾಹಿತೆಯ ಬಾಳಿಗೆ ಕೊಳ್ಳಿಯಿಟ್ಟ ರೀಲ್ಸ್​ ವಿಡಿಯೋ!

ನಟ ಅನಿರುದ್ಧ್​ಗೆ ಮತ್ತೊಮ್ಮೆ ಶಾಕ್​! ಎಸ್​.ನಾರಾಯಣ್​ರ ಮುಂದಿನ ನಡೆ ಏನು? ಇಂದು ಮಧ್ಯಾಹ್ನವೇ ನಿರ್ಧಾರ ಆಗುತ್ತಾ ಭವಿಷ್ಯ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
