ಬೆಂಗಳೂರು: ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ತಲಾ ಮೂರು ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲು 482.85 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲು ಮಂಜೂರಾತಿ ನೀಡಲಾಗಿದೆ ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಈ ಸಂಬಂಧ ಇಂದು ಅಧಿಕೃತ ಆದೇಶ ಹೊರಡಿಸಲಾಗಿದ್ದು ರಾಜ್ಯದ 16095 ಬಡ ಕಲಾವಿದರು ಈ ಸೌಲಭ್ಯವನ್ನು ಪಡೆಯಲಿದ್ದಾರೆ ಎಂದು ಅವರು ತಿಳಿಸಿದರು.
ಕಲಾವಿದರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು,ಅರ್ಜಿ ಸಲ್ಲಿಸುವಲ್ಲಿ ಯಾವುದೇ ತೊಡಕು ಉಂಟಾದರೆ ಕೂಡಲೇ ಇದಕ್ಕಾಗಿಯೇ ಇರುವ ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.ಈ ಆರ್ಥಿಕ ನೆರವು ಪಡೆಯಲು ಮಾರ್ಗಸೂಚಿಯೊಂದನ್ನು ಸಿದ್ಧಪಡಿಸಲಾಗಿದೆ ಮಾರ್ಗಸೂಚಿಯ ಅನುಸಾರ ಅರ್ಹ ಕಲಾವಿದರು ಆರ್ಥಿಕ ನೆರವಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದರು.
ಪ್ರತಿ ಜಿಲ್ಲೆಯಲ್ಲೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರನ್ನು ಒಳಗೊಂಡ ಐದು ಜನ ರ ಸಮಿತಿಯು ಅರ್ಹ ಕಲಾವಿದರನ್ನು ಆಯ್ಕೆ ಮಾಡಿ ಕೇಂದ್ರ ಕಚೇರಿಗೆ ಕಳುಹಿಸುತ್ತದೆ. ನಂತರ ಕೇಂದ್ರ ಕಚೇರಿಯಿಂದ ಕಲಾವಿದರ ಖಾತೆಗೆ ನೇರವಾಗಿ ಆರ್ ಟಿ ಜಿ ಎಸ್ ಮೂಲಕ ಪರಿಹಾರದ ಮೊತ್ತ ಜಮಾ ಆಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ .
ಪತ್ರಿಕಾ ಪ್ರಕಟಣೆ ಹೊರಡಿಸಿದ 15 ದಿನದೊಳಗೆ ಈ ಎಲ್ಲ ಪ್ರಕ್ರಿಯೆ ಮುಗಿಯಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ;ಚುನಾವಣಾ ಫಲಿತಾಂಶದ ನಂತರ ಒಂದೇ ತಿಂಗಳಲ್ಲಿ 14 ಬಾರಿ ತೈಲ ದರ ಏರಿಕೆ
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nineteen − 18 =
Remember me
