ಬೆಂಗಳೂರು:ಅರಬ್ಬಿ ಸಮುದ್ರ, ಹಿಂದೂ ಮಹಾಸಾಗರ ಹಾಗೂ ಬಂಗಾಳಕೊಲ್ಲಿಯಲ್ಲಿ ನೈಋತ್ಯ ಮಾನ್ಸೂನ್​ (ಮುಂಗಾರು ಮಾರುತ) ರೂಪುಗೊಳ್ಳುವುದಕ್ಕೆ ಆಶಾದಾಯಕ ವಾತಾವರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯದಲ್ಲಿ ಮುಂದಿನ 4 ದಿನ ಭರ್ಜರಿ ವರ್ಷಧಾರೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಕರ್ನಾಟಕ ಭಾಗದ ಪ್ರದೇಶಗಳಲ್ಲಿ ಬಿರುಸಾಗಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ಕೊಡಗು, ಶಿವಮೊಗ್ಗ,ಚಿಕ್ಕಮಗಳೂರಿನಲ್ಲಿ ಮೇ 19ರಿಂದ ಮುಂದಿನ ಮೂರು ದಿನ ಹಾಗೂ ಹಾಸನ, ಚಿತ್ರದುರ್ಗ, ತುಮಕೂರಿನಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಆರೆಂಜ್​ ಅಲರ್ಟ್​​​​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್​​​​ ಇರಲಿದೆ. ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಗುಡುಗು ಮಿಂಚು ಸಹಿತ ಸಾಧಾರಣ ವರ್ಷಧಾರೆಯಾಗಲಿದೆ.
ಸಾಹಿತ್ಯ ಕೋರ್ಸ್​ ಓದಬೇಕೆಂಬ ಆಸೆ ಇತ್ತು: ಮೇಘನಾ ಗಾಂವ್ಕರ್​ ಹೇಳಿಕೆ
ಹಲವೆಡೆ ಮಳೆ:ಬಾಗಲಕೋಟೆ, ಚಿಕ್ಕಮಗಳೂರಿನ ಮೂಡಗೆರೆ, ದಾವಣಗೆರೆ, ಹಾಸನ ನಗರ, ಕೊಡಗಿನ ಗೋಣಿಕೊಪ್ಪ, ಶಿವಮೊಗ್ಗದ ಆಗುಂಬೆ ಸೇರಿ ರಾಜ್ಯ ವಿವಿಧೆಡೆ ಶನಿವಾರ ಮಳೆಯ ಸಿಂಚನವಾಗಿದೆ. ಕೆಲವೆಡೆ ಪ್ರತಿ ಗಂಟೆಗೆ 40-50 ಕಿ.ಮೀ.ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ.
ಕರುನಾಡು ಕೂಲ್​:ಸತತ ಬಿಸಿಲಿನಿಂದಾಗಿ ಕಾದ ಕೆಂಡವಾಗಿದ್ದ ಕರುನಾಡ ಕೂಲ್​ ಆಗಿದೆ. ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ 43ರಿಂದ 45ರವರೆಗೆ ದಾಖಲಾಗುತ್ತಿರುವ ಉಷ್ಣಾಂಶ 35-36ಕ್ಕೆ ಇಳಿಮುಖವಾಗಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ 40ರ ಅಸುಪಾಸಿನಲ್ಲಿ ಕಂಡುಬರುತ್ತಿದ್ದ ತಾಪಮಾನ 32&33ಕ್ಕೆ ಇಳಿದಿದೆ. ಮುಂದಿನ ಐದು ರಾಜ್ಯ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2-4 ಡಿ.ಸೆ.ಉಷ್ಣಾಂಶ ಕುಸಿತವಾಗಲಿದೆ ಎಂದು ಇಲಾಖೆ ಮಾಹಿತಿ ಕೊಟ್ಟಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 10 =
Remember me
