ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದುರ್ಬಲವಾಗಿದ್ದ ಮುಂಗಾರು ಪ್ರಬಲವಾಗಿದ್ದು, ರಾಜ್ಯದಲ್ಲೆಡೆ ಮುಂದಿನ ನಾಲ್ಕೈದು ದಿನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಂಭವ ಇದೆ.
ಶಿವಮೊಗ್ಗದ ಆಗುಂಬೆ, ಯಾದಗಿರಿಯ ಭೀಮರಾಯನಗುಡಿ, ದಕ್ಷಿಣ ಕನ್ನಡದ ಮಂಗಳೂರು, ಚಿಕ್ಕಬಳ್ಳಾಪುರ ಹಾಗೂ ಬೆಂ.ಗ್ರಾಮಾಂತರದ ದೊಡ್ಡಬಳ್ಳಾಪುರ ಸೇರಿ ರಾಜ್ಯದ ವಿವಿಧೆಡೆ ವರ್ಷಧಾರೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಸೆ.5ರಿಂದ ಸೆ.8ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ನೀಡಿದೆ. ಬೆಳಗಾವಿ, ಬೀದರ್​, ಕಲಬುರಗಿ, ಯಾದಗಿರಿಯಲ್ಲಿ ಸೆ.5ರಂದು ಯೆಲ್ಲೋ ಅರ್ಲಟ್​ ಇರಲಿದೆ.ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಸಾಧಾರಣ ಮಳೆ ಸುರಿಯಲಿದೆ.
ಜನರ ನಿರೀಕ್ಷೆಗೆ ತಕ್ಕಂತೆ ಕೇಂದ್ರದ ಆಡಳಿತದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಇಳಿಮುಖಗೊಂಡಿದೆ. ಕರಾವಳಿ, ಉತ್ತರ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನ ಮೋಡದ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿ.ಸೆ ಮತ್ತು 20 ಡಿ.ಸೆ. ಇರಲಿದೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:twelve + nine =
Remember me
