ಬೆಂಗಳೂರು:ಉತ್ತರಾಖಂಡದ ಎತ್ತರದ ಸ್ಥಳ ಸಹಸ್ರಸ್ಥಳ್ ಮೈಯಾಳಿಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 19 ಜನರ ತಂಡ ಹವಾಮಾನ ವೈಪರೀತ್ಯ ಸಿಲುಕಿದ್ದಾರೆ. ಈ ಪೈಕಿ ನಾಲ್ವರು ಮೃತಪಟ್ಟಿದ್ದು, ತುರ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಬುಧವಾರ ಇಬ್ಬರನ್ನು ರಕ್ಷಿಸಲಾಗಿದೆ. ಉಳಿದವರ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಕಂದಾಯ ಇಲಾಖೆ ಮೂಲಗಳು ತಿಳಿಸಿವೆ.
ಹವಾಮಾನ ವೈಪರೀತ್ಯದಿಂದಾಗಿ ಉತ್ತರಾಖಂಡದಲ್ಲಿ ಪ್ರಾಣ ಕಳೆದುಕೊಂಡ ನಾಲ್ವರು ಚಾರಣಿಗರಲ್ಲಿ, ಹೆಚ್ಚಾಗಿ ಬೆಂಗಳೂರಿನವರಾಗಿದ್ದಾರೆ. ದುರಂತದಲ್ಲಿ ಸಾವನ್ನಪ್ಪಿದವರ ಗುರುತು ತಿಳಿದುಬಂದಿಲ್ಲ ಎಂದು ಇಲಾಖೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಉತ್ತರಾಖಂಡದ ಸಹಸ್ರಸ್ಥಳ್​ನಲ್ಲಿ ಸಿಕ್ಕಿಬಿದ್ದಿರುವ ಇತರ ಚಾರಣಿಗರ ರಕ್ಷಣಾ ಕಾರ್ಯಾಚರಣೆಯಲ್ಲಿ ಪ್ರಗತಿಯಲ್ಲಿದ್ದು, ಗರ್ವಾಲ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಅನ್ನು ಸಹ ಸೇವೆಗೆ ಬಳಸಲಾಗಿದೆ ಎಂದು ಹೇಳಿದರು.
ಈ ಟ್ರೆಕ್ಕಿಂಗ್ ಅನ್ನು ಯಾರು ಆಯೋಜನೆ ಮಾಡಿದ್ದಾರೆಂದು ಈವರೆಗೆ ತಿಳಿದು ಬಂದಿಲ್ಲ. ಕಂದಾಯ ಸಚಿವ ಕೃಷ್ಣಬೈರೇಗೌಡ ನೀಡಿರುವ ತಾಜಾ ಮಾಹಿತಿ ಪ್ರಕಾರ ಚಾರಣಿಗರ ತಂಡದಲ್ಲಿ ಒಟ್ಟು 19 ಚಾರಣಿಗರು, ನಾಲ್ವರು ಮಾರ್ಗದರ್ಶಿಗಳಿದ್ದಾರೆ. ಇಂಡಿಯನ್​ ಮೌಂಟೇನಿಯರಿಂಗ್​ ಸದಸ್ಯರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು.
ರಕ್ಷಣಾ ಕಾರ್ಯಾಚರಣೆಗೆ ಸ್ಥಳೀಯವಾಗಿ ಲಭ್ಯ ಹೆಲಿಕಾಪ್ಟರ್​ಗಳು ಬಳಕೆಯಾಗಿವೆ. ಈಗಾಗಲೇ ಇಬ್ಬರು ಚಾರಣಿಗರನ್ನು ರಕ್ಷಿಸಿದ್ದು, ಇನ್ನುಳಿದವರ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ವಿವರಿಸಿದ್ದಾರೆ.
ದೇಶದ ಚಿತ್ತ ದೆಹಲಿಯತ್ತ: ಒಂದೇ ವಿಮಾನದಲ್ಲಿ ರಾಜಧಾನಿಗೆ ಪ್ರಯಾಣ ಬೆಳೆಸಿದ ನಿತೀಶ್​-ತೇಜಸ್ವಿ!

ಊಟಕ್ಕೂ ಮುನ್ನ ಇದನ್ನು ಕುಡಿದರೆ ದೇಹದ ತೂಕ ಬೇಗ ಕಡಿಮೆಯಾಗುತ್ತೆ! ನೀವು ಫಿಟ್​ ಆಗಿರುತ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 7 =
Remember me
