ಗದಗ:ಗದಗ ಜಿಲ್ಲೆಯ ಮುಂಡರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಉಸಿರುಗಟ್ಟಿಸುವ ವಾತಾವರಣ ಮುಂದುವರಿದಿದ್ದು, ವೆಂಟಿಲೇಟರ್ ಸಿಗದೆ ಒಂದೇ ದಿನದಲ್ಲಿ ಒಟ್ಟು ನಾಲ್ವರು ಕರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ಕರೊನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೆಂಟಿಲೇಟರ್, ಆಕ್ಸಿಜನ್, ಬೆಡ್​ಗಳ ಕೊರತೆ ಹೆಚ್ಚಾಗಿದ್ದು, ಸರಿಯಾದ ಸಮಯಕ್ಕೆ ಬೇಕಾದಷ್ಟು ಸವಲತ್ತುಗಳು ಸಿಗದೆ ರೋಗಿಗಳು ಸಾವಿಗೀಡಾಗುವಂತಾಗಿದೆ. ಅಂಥದ್ದೇ ಪರಿಸ್ಥಿತಿ ಮುಂಡರಗಿ ಸರ್ಕಾರಿ ಆಸ್ಪತ್ರೆಯಲ್ಲೂ ಇದ್ದು, ವೆಂಟಿಲೇಟರ್ ಇಲ್ಲ ಎಂಬ ಕಾರಣಕ್ಕೆ ಇವತ್ತೊಂದೇ ದಿನ ನಾಲ್ಕು ಜನರು ಅನ್ಯಾಯವಾಗಿ ಸಾಯುವಂತಾಗಿದೆ.
ಇದನ್ನೂ ಓದಿ:ಸೋಂಕಿತ ತಾಯಿಯ ಶವಸಂಸ್ಕಾರಕ್ಕೆ ಮುಂದಾದ ಮಗನಿಗೆ ಗ್ರಾಮಸ್ಥರಿಂದ ವಿರೋಧ; ಕಾರಣವೇನು, ಆಮೇಲೇನಾಯಿತು?
ಕರೊನಾ ಸೋಂಕಿಗೆ ಒಳಗಾಗಿರುವವರ ಪೈಕಿ ಈ ಆಸ್ಪತ್ರೆಯಲ್ಲಿ ಇವತ್ತು ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ ವೆಂಟಿಲೇಟರ್ ಸಿಗದೆ ಮೃತಪಟ್ಟಿದ್ದು, ಇದೀಗ ಮತ್ತೊಬ್ಬ ಮಹಿಳೆ ಕೂಡ ಮೃತಪಟ್ಟಿದ್ದಾರೆ. ಇವತ್ತು ಬೆಳಗ್ಗೆ 65 ವರ್ಷದ ಮಹಿಳೆಯೊಬ್ಬರು ಈ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಇವರಿಗೆ ಪೋಷಕರು ಹಾಗೂ ವೈದ್ಯರು ಎಷ್ಟೇ ಪ್ರಯತ್ನ ಪಟ್ಟರೂ ವೆಂಟಿಲೇಟರ್ ವ್ಯವಸ್ಥೆ ಆಗಿರಲಿಲ್ಲ. ಇಲ್ಲಿ ವೆಂಟಿಲೇಟರ್ ಬೆಡ್​ಗಳೆಲ್ಲ ಭರ್ತಿಯಾಗಿದ್ದು, ಇವರಿಗೆ ವೆಂಟಿಲೇಟರ್ ಬೆಡ್ ಸಿಗದೆ ಮೃತಪಟ್ಟಿದ್ದಾರೆ.
ವೆಂಟಿಲೇಟರ್​ ಸಿಗದೆ ಆಸ್ಪತ್ರೆಯೊಳಗೇ ಮೂವರು ಕರೊನಾ ಸೋಂಕಿತರ ಸಾವು

ಸೋಂಕಿತ ತಾಯಿ ತೀರಿಹೋದ ಮೂರೇ ದಿನಕ್ಕೆ ಅಣ್ಣ-ತಮ್ಮನೂ ಕರೊನಾಗೆ ಬಲಿ; ಅಮ್ಮಂದಿರ ದಿನವೇ ಇಬ್ಬರೂ ಏಕಕಾಲಕ್ಕೇ ನಿಧನ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:one × one =
Remember me
