ಬೆಂಗಳೂರು:ರಾಜ್ಯದ ಪರ್ವಿುಟ್ ಪಡೆಯದೆ ಅಂತಾರಾಜ್ಯ ಸಂಚಾರ ಮಾಡುತ್ತಿದ್ದ 4 ಬಸ್​ಗಳನ್ನು ಯಲಹಂಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸಾರಿಗೆ ಅಧಿಕಾರಿಗಳು ಶನಿವಾರವಷ್ಟೆ 15 ಲಕ್ಷ ರೂ. ತೆರಿಗೆ ವಂಚನೆ ಮಾಡಿದ್ದ ಬೆಂಜ್ ಕಾರನ್ನು ವಶಕ್ಕೆ ಪಡೆದಿದ್ದರು. ಸೋಮವಾರ ಹೈದರಾಬಾದ್ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿ ಬಸ್​ಗಳನ್ನು ಜಪ್ತಿ ಮಾಡಿದ್ದಾರೆ.
ಎಆರ್, ಎನ್​ಎಲ್ ನೋಂದಣಿ: ವಶಕ್ಕೆ ಪಡೆಯಲಾಗಿ ರುವ ಬಸ್​ಗಳು ಜಬ್ಬಾರ್ ಮತ್ತು ಆರೆಂಜ್ ಸಂಸ್ಥೆಯ ನಾಮಫಲಕ ಹೊಂದಿದ್ದು, ನಾಗಲ್ಯಾಂಡ್ ಮತ್ತು ಅರುಣಾಚಲಪ್ರದೇಶದಲ್ಲಿ ನೋಂದಣಿ ಮಾಡಲಾಗಿದೆ. ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್ ಮತ್ತು ವಾಹನ ನಿರೀಕ್ಷಕ ರಾಜ್​ಕುಮಾರ್ ಅವರಿದ್ದ ತಂಡ ಪರಿಶೀಲನೆ ನಡೆಸಿದ ವೇಳೆ ಬಸ್ ಚಾಲಕರ ಬಳಿ ರಾಜ್ಯದ ಪರ್ವಿುಟ್ ಇಲ್ಲದಿರುವುದು ತಿಳಿದುಬಂದಿದೆ. ಇದೀಗ ಬಸ್ ಮಾಲೀಕರಿಗೆ ದಾಖಲೆ ಸಲ್ಲಿಸುವಂತೆ ಯಲಹಂಕ ಆರ್​ಟಿಒದಿಂದ ನೋಟಿಸ್ ನೀಡಲಾಗಿದೆ. ದಾಖಲೆ ಸಲ್ಲಿಸಿದ ನಂತರ, ತೆರಿಗೆ ಎಷ್ಟು ಬಾಕಿ ಇದೆ ಎಂಬುದನ್ನು ಪರಿಶೀಲಿಸಲಾಗುತ್ತದೆ. ಒಂದು ವೇಳೆ ದಾಖಲೆಗಳಿಲ್ಲದಿದ್ದರೆ ಅದಕ್ಕೆ ಎಷ್ಟು ತೆರಿಗೆ ಮತ್ತು ದಂಡ ವಿಧಿಸಬೇಕು ಎಂಬುದನ್ನು ಲೆಕ್ಕ ಹಾಕಿ ವಸೂಲಿ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − two =
Remember me
