ಬೆಂಗಳೂರು:ರಾಜ್ಯದಲ್ಲಿ ಮುಂದಿನ 5 ದಿನ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಗುರುವಾರ ಹಲವು ಭಾಗಗಳಲ್ಲಿ ಸಾಧಾರಣ ಮಳೆ ಸುರಿದಿದೆ.
ಇದನ್ನೂ ಓದಿ:ಬಂಗಾರ ಕದ್ದು ಗುಜರಿಗೆ ಮಾರಿದ ಕಳ್ಳ; 7 ಲಕ್ಷ ರೂ. ಮೌಲ್ಯದ ಚಿನ್ನಕ್ಕೆ ಸಿಕ್ಕಿದ್ದು 30 ಸಾವಿರ ರೂ.!
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ,ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಏ.7ರಿಂದ ಏ.11ರವರೆಗೆ, ಚಿತ್ರದುರ್ಗ, ದಾವಣಗೆರೆ ಹಾಗೂ ಮೈಸೂರಿನಲ್ಲಿ ಮುಂದಿನ ಎರಡು ದಿನ ಮಳೆ ಸುರಿಯಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 24 ಗಂಟೆ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಪ್ರಸಕ್ತ ವರ್ಷದಲ್ಲಿ ಇದೇ ಮೊದಲ ಬಾರಿಗೆ ಕಲಬುರಗಿಯಲ್ಲಿ ಗರಿಷ್ಠ ತಾಪಮಾನದಲ್ಲಿ ಗುರುವಾರ 40.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಯಚೂರು, ವಿಜಯಪುರ, ಗದಗ, ಬಳ್ಳಾರಿ ಹಾಗೂ ಧಾರವಾಡದಲ್ಲಿ ಗರಿಷ್ಠ ತಾಪಮಾನದಲ್ಲಿ ಸರಾಸರಿ 37 ರಿಂದ 39ರವರೆಗೆ ಉಷ್ಣಾಂಶ ದಾಲಾಗಿದೆ. ಬಾಗಲಕೋಟೆಯಲ್ಲಿ ಕನಿಷ್ಠ ತಾಪಮಾನದಲ್ಲಿ 18.2 ಡಿಗ್ರಿ ಸೆಲ್ಸಿಯಸ್ ಇತ್ತು. ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ 33ರಿಂದ 35ರವರೆಗೆ ಉಷ್ಣಾಂಶ ದಾಖಲಾಗಿದೆ.
ಇದನ್ನೂ ಓದಿ:ಆನ್‌ಲೈನ್ ಗೇಮಿಂಗ್ ಆ್ಯಪ್‌ನಲ್ಲಿ 49 ರೂ. ಹೂಡಿಕೆ ಮಾಡಿದ ವ್ಯಕ್ತಿ ರಾತ್ರೋರಾತ್ರಿ ಕೋಟಿ ರೂ. ಒಡೆಯನಾದ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
