ಬೆಂಗಳೂರು:40% ಕಮಿಷನ್ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶ ನೀಡಿದ ಬೆನ್ನಲ್ಲೆ, ತನಿಖೆ ಮಾಡಿದರೆ ತಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿನ 40% ಕಮಿಷನ್‌ ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ. ಕಾಂಗ್ರೆಸ್​ನವರು ಒಂದುವರೆ ವರ್ಷದಿಂದ ಆರೋಪ ಮಾಡುತ್ತಿದೆ. ಇಲ್ಲಿಯವರೆಗೂ ದಾಖಲೆ ಕೊಟ್ಟಿಲ್ಲ. ತನಿಖೆ ಮಾಡಿದರೆ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.ಇದನ್ನೂ ಓದಿ:ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತಗಳನ್ನು ಕಡಿಮೆ ಮಾಡಲು ಫೈನ್ ಸ್ಪೀಡ್ ಲಿಮಿಟ್!ಪ್ರಸ್ತುತ ಸರ್ಕಾರವು ನಿಜವಾಗಲೂ ಭ್ರಷ್ಟಾಚಾರ ವಿರುದ್ಧ ಇದ್ದರೆ, 2013 ರಿಂದ 2023ರವರೆಗಿನ ಎಲ್ಲ ಪ್ರಕರಣಗಳು ಬಗ್ಗೆ ತನಿಖೆ ಮಾಡಬೇಕು ಕೇವಲ ಸೆಲೆಕ್ವಿವ್​​ ಆಗಿ ರಾಜಕೀಯ ಪ್ರೇರಿತವಾಗಿ ತನಿಖೆ ಮಾಡಿದರೆ ಹೇಗೆ? ಯಾರು ಯಾರು ತಪ್ಪಿತಸ್ಥರು ಇದ್ದಾರೆ ಅವರಿಗೆಲ್ಲ ಶಿಕ್ಷೆಯಾಗಬೇಕು ಎಂದು ಮಾಜಿ ಸಿಎಂ ಸರ್ಕಾರವನ್ನು ಆಗ್ರಹಿಸಿದ್ದಾರೆ.ಈಗಾಗಲೇ ಹಲವು ಪ್ರಕರಣಗಳು ಲೋಕಾಯುಕ್ತದ ಮುಂದೆ ಇವೆ. ಜತೆಗೆ ಬಿಬಿಎಂಪಿ ಇತರ ಇಲಾಖೆ ವಿರುದ್ದದ ೪೦% ಕಮಿಷನ್​ ಕುರಿತಾದ ಪ್ರಕರಣಗಳು ಲೋಕಾಯುಕ್ತಾದಲ್ಲಿವೆ. ಇವುಗಳನ್ನು ತನಿಖೆಯನ್ನು ನಡೆಸಲಿ, ಗುತ್ತಿಗೆದಾರದ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪದ ವಿರುದ್ದ ಮುನಿರತ್ನ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಇನ್ನೂ ಅದಕ್ಕೆ ಅವರು ದಾಖಲೆಯಾಗಲಿ, ಉತ್ತರವಾಗಲಿ ನೀಡಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + twelve =
Remember me
