| ಶ್ರೀಕಾಂತ್ ಶೇಷಾದ್ರಿ ಬೆಂಗಳೂರುಬಸವರಾಜ ಬೊಮ್ಮಾಯಿ ಸರ್ಕಾರವನ್ನು ಕಾಡಿದ್ದ 40 ಪರ್ಸೆಂಟ್ ಕಮೀಷನ್ ಆರೋಪವನ್ನು ತಾತ್ವಿಕವಾಗಿ ತುದಿಮುಟ್ಟಿ ಸಲು ಭಗೀರಥ ಪ್ರಯತ್ನ ನಡೆಸಿರುವ ಸಿದ್ದರಾಮಯ್ಯ ಸರ್ಕಾರ, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ತನಿಖಾ ಆಯೋಗ ರಚಿಸಿ ತಿಂಗಳು ಕಳೆದಿದೆ.
ಇದೇ ವಾರ ತನಿಖೆ ಆರಂಭವಾಗಲಿದ್ದು, ಈಗಾಗಲೆ ಈ ವಿಷಯದಲ್ಲಿ ಆರೋಪ ಮಾಡಿದವರು ಅಥವಾ ಇನ್ಯಾವುದೇ ದೂರುಗಳಿದ್ದರೆ ಅದನ್ನು ಪರಿಗಣಿಸಿ ತನಿಖೆ ಆರಂಭಿಸಲಾಗುತ್ತದೆ. ಇನ್ನೊಂದು ಮಹತ್ವದ ಸಂಗತಿ ಎಂದರೆ ಸರ್ಕಾರ ಈ ತನಿಖಾ ಆಯೋಗಕ್ಕೆ ಸರ್ಕಾರ ಒಂದು ಚೌಕಟ್ಟು ಹಾಕಿಕೊಟ್ಟಿತ್ತು. ಇದರಲ್ಲಿ ಕೆಲವು ಸ್ಪಷ್ಟತೆ ಇಲ್ಲವಾಗಿದೆ. ಹೀಗಾಗಿ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದ್ದು, ತನಿಖಾ ಚೌಕಟ್ಟು ಪರಿಷ್ಕರಣೆಯಾಗುವ ಸಾಧ್ಯತೆಯೂ ಇದೆ ಎಂದು ಸರ್ಕಾರದ ಉನ್ನತ ಅಧಿಕಾರಿಗಳು ‘ವಿಜಯವಾಣಿ’ಗೆ ತಿಳಿಸಿದ್ದಾರೆ.
ಹಾಗೆಯೇ, ತನಿಖಾ ಆಯೋಗಕ್ಕೆ ಲೋಕೋಪಯೋಗಿ ಇಲಾಖೆಯಲ್ಲಿ ಜಾಗ ಗುರುತಿಸಲಾಗಿದೆ. ಅಧಿಕಾರಿ, ಸಿಬ್ಬಂದಿ ನಿಯೋಜನೆ, ವಾಹನ, ಪೀಠೋಪಕರಣ, ದೂರವಾಣಿ ಇತ್ಯಾದಿ ಸೌಲಭ್ಯಗಳನ್ನು ಲೋಕೋಪಯೋಗಿ ಇಲಾಖೆ ಒದಗಿಸಲಿದೆ.
ಪ್ರಕರಣದ ಹಿನ್ನೆಲೆ:ಪ್ರಧಾನಿ ಹಾಗೂ ನಿಕಟಪೂರ್ವ ಸಿಎಂ ಅವರಿಗೆ ಕರ್ನಾಟಕ ಸ್ಟೇಟ್ ಕಂಟ್ರಾ್ಯಕ್ಟರ್ ಅಸೋಸಿ ಯೇಷನ್ ಅಧ್ಯಕ್ಷ ಡಿ.ಕೆಂಪಣ್ಣ ಮನವಿ ಸಲ್ಲಿಸಿ, ರಾಜ್ಯದಲ್ಲಿ ಪ್ರಮುಖ ಕಾಮಗಾರಿ ನಡೆಸುವ ಇಲಾಖೆಗಳಲ್ಲಿ ನಡೆಯುತ್ತಿರುವ ಪ್ಯಾಕೇಜ್ ಪದ್ಧತಿ, ಬಾಕಿ ಮೊತ್ತದ ಬಿಡುಗಡೆ ಮತ್ತು ಟೆಂಡರ್ ಪ್ರಕ್ರಿಯೆ, ಇತ್ಯಾದಿಗಳಲ್ಲಿ ಶೇ.40ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಲಂಚಗುಳಿತನ, ಭ್ರಚ್ಟಾಚಾರ ನಡೆಯುತ್ತಿದೆ ವಿವರಿಸಿದ್ದರು.
ಸರ್ಕಾರ ಹೇಳಿದ್ದೇನು?:ಹೆಚ್ಚಿನ ಪ್ರಮಾಣದಲ್ಲಿ ಕಾಮಗಾರಿ ನಡೆಸುವ ಇಲಾಖೆಗಳಾದ ಲೋಕೋಪಯೋಗಿ, ಜಲಸಂಪ ನ್ಮೂಲ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಣ್ಣ ನೀರಾವರಿ ಇಲಾಖೆಗಳಲ್ಲಿ ನಡೆಸುವ ಟೆಂಡರ್ ಪ್ರಕ್ರಿಯೆ, ಪ್ಯಾಕೇಜ್ ಪದ್ಧತಿ, ಪುನರ್ ಅಂದಾಜು ಬಾಕಿ ಮೊತ್ತ ಬಿಡುಗಡೆ ಇತ್ಯಾದಿಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು ದೂರುದಾರ ಕೆಂಪಣ್ಣ ಆರೋಪದ ಸತ್ಯಾಸತ್ಯತೆ ಪರಿಶೀಲಿಸಲು ತನಿಖೆ ಅಗತ್ಯ ಮನಗಂಡು ಸಮಿತಿ ರಚಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿತ್ತು. ನ್ಯಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ಆ.25ರಂದು ಆದೇಶ ಹೊರಡಿಸಿತ್ತು.
40 ಪರ್ಸೆಂಟ್ ಕಮೀಷನ್ ಆರೋಪ ಸಂಬಂಧಿಸಿ ದಂತೆ ತನಿಖೆ ನಡೆಸಲು ರಚನೆಯಾಗಿರುವ ತನಿಖಾ ಆಯೋಗದ ಚಟುವಟಿಕೆ ಆರಂಭವಾಗಲಿದೆ. ಆಯೋಗಕ್ಕೆ ಲೋಕೋಪಯೋಗಿ ಇಲಾಖೆಯಲ್ಲಿ ಜಾಗ ಗುರುತಿಸಲಾಗಿದೆ.
| ನ್ಯಾ. ನಾಗಮೋಹನ್ ದಾಸ್, ತನಿಖಾ ಆಯೋಗದ ಮುಖ್ಯಸ್ಥರು
ಕಾಲಮಿತಿ ಮೂರು ತಿಂಗಳು:ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕೆಂದು ಸರ್ಕಾರ ಅಪೇಕ್ಷಿಸಿದೆ. ಈ ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ, ಆಯೋಗವು ತನಿಖೆ ಪೂರ್ಣಗೊಳಿಸಲು, ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು, ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ಸಂಬಂಧ ಪಟ್ಟ ಇಲಾಖೆಗಳೂ ಸಹಕರಿಸಬೇಕೆಂದು ಸೂಚಿಸಲಾಗಿದೆ.
2. ಆಯೋಗವು ತನಗೆ ನೀಡಿದ ಕಾರ್ಯವ್ಯಾಪ್ತಿ ಜತೆಗೆ ಕೆಂಪಣ್ಣ ನೀಡಿದ ಮನವಿ, ದೂರು ಅರ್ಜಿಗಳಲ್ಲಿನ ಎಲ್ಲ ಅಂಶಗಳನ್ನೂ ವಿವರವಾಗಿ ತನಿಖೆ ವ್ಯಾಪ್ತಿಯಲ್ಲಿ ಪರಿಶೀಲಿಸಲಿದೆ.
3. ಯೋಜನೆ, ಕಾಮಗಾರಿಗಳಿಗೆ ನಿಯಮಾನುಸಾರ ಆಡಳಿತಾತ್ಮಕ ಅನುಮೋದನೆ ಪಡೆದಿರುವ ಬಗ್ಗೆ ಅನುಷ್ಠಾನಗೊಳಿಸಲಾದ ಕಾಮಗಾರಿ, ಯೋಜನೆಗಳ ಗುಣಮಟ್ಟ ಕಾಮಗಾರಿಗಳ ಅಂದಾಜನ್ನು ನಿಯಮಗಳ ಪ್ರಚಲಿತ ಅನುಸೂಚಿ ದರಗಳ ಅನುಸಾರ ತಯಾರಿಸಿರುವ ಬಗ್ಗೆ ಕಾಮಗಾರಿಗಳ ಅಂದಾಜಿನಲ್ಲಿನ ಪರಿಮಾಣ (ಕ್ವಾಂಟಿಟಿ) ವಾಸ್ತವಿಕವಾಗಿದೆಯೇ ಅಥವಾ ಕೃತಕವಾಗಿ ಹೆಚ್ಚಿಸಲಾಗಿದೆಯೇ? ಹೆಚ್ಚಿಸಿದ್ದಲ್ಲಿ ಅವುಗಳ ಪ್ರಮಾಣ ಮತ್ತು ಹಣಕಾಸಿನ ಬದ್ಧತೆ ಜತೆಗೆ ಯಾವ ಹಂತದಲ್ಲಿ ಹೆಚ್ಚಿಸಲಾಗಿದೆ ಎಂಬುದನ್ನು ಪರಿಶೀಲನೆ ನಡೆಸಬೇಕಾಗುತ್ತದೆ.
4. ಕಾಮಗಾರಿಗಳ ಸಂದರ್ಭದಲ್ಲಿ ಉಂಟಾಗಿರುವ ಹೆಚ್ಚುವರಿ ವ್ಯತ್ಯಾಸದ ಅನಿವಾರ್ಯತೆ ಮತ್ತು ಅಗತ್ಯತೆ, ಅನಿವಾರ್ಯವಾಗಿದ್ದಲ್ಲಿ ಮೂಲ ಅಂದಾಜಿನಲ್ಲಿ ಕೈಬಿಡಲು ಕಾರಣ ಹಾಗೂ ಇವುಗಳಿಗೆ ಸಕ್ಷಮ ಪ್ರಾಧಿಕಾರದ ಅನುಮೋದನೆ ನೀಡಿರುವ ಕುರಿತು ಪರಿಶೀಲನೆ ನಡೆಸಲಾಗುತ್ತದೆ.
5. ಯಾವುದಾದರೂ ಕಾಮಗಾರಿ ಗಳನ್ನು ನಿರ್ವಹಿಸದೆಯೇ ಬಿಲ್ ಪಾವತಿ ಮಾಡಲಾಗಿದೆಯೇ ಅಥವಾ ಅನುಷ್ಠಾನವಾದ ಕಾಮಗಾರಿಗಳ ಪ್ರಮಾಣಕ್ಕಿಂತ ಹೆಚ್ಚುವರಿ ಬಿಲ್ ಪಾವತಿಸಲಾಗಿದೆಯೇ? ಈ ಕಾಮಗಾರಿಗಳ ಟೆಂಡರ್​ಗಳನ್ನು ಕರೆಯುವ ಕೆಲವೇ ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ಹಾಗೂ ಉಳಿದ ಗುತ್ತಿಗೆದಾರರು ಟೆಂಡರ್ ಪ್ರಕ್ರಿಯೆಗಳಲ್ಲಿ ಭಾಗವಹಿಸದಂತೆ ಷರತ್ತು ರೂಪಿಸಲಾಗಿತ್ತೇ? ಎಂಬುದನ್ನು ಹುಡುಕಲಾಗುತ್ತದೆ.
ಮೀನು ಮಾರುವವರಿಗೂ ಎಚ್ಚರಿಕೆ: ಆ ಒಂದು ದಿನ ಮಾರಾಟ ಮಾಡಿದರೆ ಕಾನೂನು ಕ್ರಮ, ದಂಡನೆ!

ವಾರವಿಡೀ ಹುಡುಕಾಡಿದರೂ ನಾಪತ್ತೆಯಾದವ ಸಿಗಲಿಲ್ಲ; ಒಂದು ಕಲ್ಲಿಗೆ ಪೂಜೆ ಮಾಡುತ್ತಿದ್ದಂತೆ ಆತ ಮನೆಗೆ ಮರಳಿದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
