ಬೆಂಗಳೂರು:ಸ್ವಾವಲಂಬಿಗಳಾಗುವ ಮೂಲಕ ರಾಜ್ಯದಲ್ಲಿ ಆರ್ಥಿಕ ಕ್ರಾಂತಿಗೆ ಮಹಿಳೆಯರು ಮುನ್ನುಡಿ ಬರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಮಹಿಳಾ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ವಿವಿಧ ಕ್ಷೇತ್ರಗಳ ಸಾಧಕಿಯರಿಗೆ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ’ ಪ್ರದಾನ ಮಾಡಿ ಅವರು ಮಾತನಾಡಿದರು.
ಭಾರತೀಯ ಸಂಸ್ಕೃತಿಯಲ್ಲಿ ತಾಯಿಗೆ ವಿಶೇಷವಾದ ಸ್ಥಾನಮಾನವಿದೆ. ಮಹಿಳೆ ಶಕ್ತಿಯ ಪ್ರತೀಕ. ಆಕೆಯಿಂದಲೇ ಈ ಜಗತ್ತು. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾದಾಗ ಮಾತ್ರ ದೇಶ ಪ್ರಗತಿಯಾಗುತ್ತದೆ. ಭಾರತ ದೇಶ ಉಳಿತಾಯಮುಖಿ ಆರ್ಥಿಕತೆ ಹೊಂದಿದೆ. ಖರ್ಚುಗಳನ್ನು ಕಡಿಮೆ ಮಾಡಿ ಆಪತ್ಕಾಲಕ್ಕೆ ಹಣವನ್ನು ಉಳಿತಾಯ ಮಾಡುವ ಸಂಸ್ಕೃತಿ ನಮ್ಮ ಮಹಿಳೆಯರಲ್ಲಿದೆ. ಅವರಿಂದ ಮುಂದೆ ದೇಶದಲ್ಲಿ ದೊಡ್ಡ ಆರ್ಥಿಕ ಬದಲಾವಣೆ ಆಗಲಿದೆ ಎಂದ ವಿಶ್ವಾಶ ವ್ಯಕ್ತಪಡಿಸಿದರು.
ಉಳಿತಾಯ ಸಂಸ್ಕೃತಿ ಅಡುಗೆ ಮನೆಯಲ್ಲಿದೆ:ಮುಂದುವರಿದ ದೇಶಗಳ ಬ್ಯಾಂಕುಗಳಿಗೆ ಹೋಲಿಸಿದರೆ, ಭಾರತ ದೇಶದಲ್ಲಿ ಉಳಿತಾಯ ಸಂಸ್ಕೃತಿ ಆರಂಭವಾಗುವುದು ಅಡುಗೆ ಮನೆಯಲ್ಲಿ. ಮಹಿಳೆಯರು ಚಿಲ್ಲರೆ ಹಣವನ್ನು ಸಾಸಿವೆ, ಜೀರಿಗೆ ಡಬ್ಬಿಯಲ್ಲಿ ಇಡುವ ಸಂಸ್ಕೃತಿಯನ್ನು ಅನುಸರಿಸಿಸುವ ಮೂಲಕ ಉಳಿತಾಯ ಸಂಸ್ಕೃತಿಯನ್ನು ಬೆಳೆಸಿದವರು. ಇದು ದೊಡ್ಡ ದೊಡ್ಡ ಬ್ಯಾಂಕುಗಳಿಗಿಂತ ಸದೃಢವಾದದ್ದು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಕಲೆ, ಕ್ರೀಡೆ, ಶಿಕ್ಷಣ, ಸಾಹಿತ್ಯ, ವೀರಮಹಿಳೆ ಸೇರಿ ಮಹಿಳಾ ಅಭಿವೃದ್ಧಿಗಾಗಿ ಶ್ರಮಿಸಿದ ವಿವಿಧ ಕ್ಷೇತ್ರಗಳ 20 ಸಾಧಕ ಮಹಿಳೆಯರು ಹಾಗೂ 6 ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಜತೆಗೆ ರಾಜ್ಯಮಟ್ಟದ ಅತ್ಯುತ್ತಮ ಸ್ತ್ರೀ ಶಕ್ತಿ ಗುಂಪುಗಳಿಗೆ, ಮಕ್ಕಳ ಕ್ಷೇತ್ರದ ಪ್ರಶಸ್ತಿಗಳನ್ನು ಹಾಗೂ ಅಸಾಧಾರಣ ಸಾಧನೆಗಾಗಿ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ – 22 ನೀಡಿ ಗೌರವಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್, ಶಾಸಕರಾದ ತಮ್ಮಣಗೌಡ ಪಾಟೀಲ, ಅರುಣ್ ಷಹಾಪೂರ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ಆರ್. ನಾಯ್ಡು ಮೊದಲಾದವರು ಉಪಸ್ಥಿತರಿದ್ದರು.
ಮಹಿಳೆಗೆ ಸಮಾನ ಅವಕಾಶ:ಮಹಿಳೆ ಹಾಗೂ ಮಕ್ಕಳ ಕಲ್ಯಾಣ ಕಾರ್ಯಕ್ರಮಗಳಿಗಾಗಿಯೇ ಸರ್ಕಾರ 43,118 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದು, ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಗುಡಿಕೈಗಾರಿಕೆಯಿಂದ ಸ್ಟಾರ್ಟ್ ಅಪ್​ವರೆಗೂ ಸಮಾನ ಅವಕಾಶ ನೀಡಲಾಗುವುದು. ಸ್ವಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳಿಗೆ ಬ್ರಾಂಡಿಂಗ್ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆ ಸೌಲಭ್ಯ ಕಲ್ಪಿಸಲು ಅಮೆಜಾನ್ ಸಂಸ್ಥೆಯೊಂದಿಗೆ ಸರ್ಕಾರ ಒಪ್ಪಂದಕ್ಕೆ ಸಹಿ ಹಾಕಿದೆ. ಜತೆಗೆ ಮಹಿಳೆ ಮತ್ತು ಮಕ್ಕಳ ಆರೋಗ್ಯಕ್ಕೆ ವಿಶೇಷ ಗಮನ ಹರಿಸಲಾಗಿದೆ ಎಂದು ಹೇಳಿದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
