ಬೆಂಗಳೂರು: ರಾಜ್ಯದಲ್ಲಿ ಡೆಂಘೆ ರೋಗ ತಡೆಗೆ ಸರ್ಕಾರ ಗಂಭೀರ ಪ್ರಯತ್ನ ನಡೆಸಿದ್ದರೂ, ಭಾನುವಾರ ಮತ್ತೆ ಹೊಸದಾಗಿ 445 ಪ್ರಕರಣಗಳು ದೃಢಪಟ್ಟಿವೆ. ರಾಜಧಾನಿ ಒಂದರಲ್ಲೇ 294 ಪ್ರಕರಣಗಳು ದೃಢಪಟ್ಟಿದ್ದು ರೋಗವನ್ನು ತಡೆಗಟ್ಟಲು ಬಿಬಿಎಂಪಿ ಹರಸಾಹಸ ನಡೆಸಿದೆ.
ಸತತ ಮಳೆ ಕಾಣುತ್ತಿರುವ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಡೆಂಘೆ ಪ್ರಕರಣಗಳು ಮೊದಲ ಬಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದಿವೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ 62 ಪ್ರಕರಣಗಳು, ಉಡುಪಿ – 5, ಚಿಕ್ಕಮಗಳೂರು – 13, ಧಾರವಾಡ – 12, ತುಮಕೂರು -19, ಮಂಡ್ಯ – 33 ಸೇರಿ ಒಂಬತ್ತು ಜಿಲ್ಲೆಗಳಲ್ಲಿ ರೋಗ ಬಾಧೆ ಹರಡಿದೆ.
ಆರೋಗ್ಯ ಇಲಾಖೆ ಮಾಹಿತಿಯಂತೆ ಭಾನುವಾರ 2,630 ಪರೀಕ್ಷೆ ನಡೆಸಿದ್ದು, 18 ವರ್ಷ ಮೇಲ್ಪಟ್ಟವರಲ್ಲೇ ಡೆಂಘೆ ರೋಗ ಲಕ್ಷಣಗಳು ಹೆಚ್ಚಾಗಿ ಕಂಡುಬಂದಿದೆ. ಪ್ರಸ್ತುತ ಡೆಂಘೆ ಪೀಡಿತರಲ್ಲಿ 308 ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಕೆಲ ಜಿಲ್ಲೆಗಳಲ್ಲಿ ರೋಗಿಗಳಿಗೆ ಹಾಸಿಗೆ ಸಿಗುತ್ತಿಲ್ಲ ಎಂಬ ದೂರು ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಡೆಂಘೆ ಪ್ರಕರಣಗಳಿಗೆ ಹೆಚ್ಚಿನ ಹಾಸಿಗೆಗಳನ್ನು ಮೀಸಲಿಸಿರುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
