ಬೆಂಗಳೂರುಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ನಡುವಿನ ಜಟಾಪಟಿ ಇದೀಗ ಬೀದಿ ರಂಪವಾಗಿದೆ.
ಕಾರ್ಯದರ್ಶಿ ಅವರು ಸತತವಾಗಿ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ಆರೋಪಿಸಿ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರು ಸಾಕ್ಷ್ಯ ಸಮೇತ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ.
ಇಷ್ಟು ಮಾತ್ರವಲ್ಲ, ಸದ್ಯ ಕಾರ್ಯದರ್ಶಿ ಅವರ ಟಿಪ್ಪಣಿಗಳನ್ನು ಪರಿಶೀಲಿಸಲಾಗುತ್ತಿದ್ದು, ಇನ್ನೂ ಕೆಲವು ಅಂಶಗಳ ಬಗ್ಗೆ ಕಾರ್ಯದರ್ಶಿ ಅವರ ಮಾಹಿತಿ ಪಡೆಯಬೇಕಿದೆ. ಎಲ್ಲ ಮಾಹಿತಿಗಳು ಲಭ್ಯವಾದ ನಂತರ ಅವುಗಳನ್ನು ಮುಖ್ಯಮಂತ್ರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದು ಟೆಂಡರ್ ಕುರಿತು ತನಿಖೆಗೆ ಮತ್ತು ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದಾಗಿ ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ವಿವಿಧ ಸುಧಾರಣಾ ಕ್ರಮಗಳ ಅನುಷ್ಠಾನಕ್ಕೆ ಮಂಗಳವಾರ ನಡೆದ (ಆ.29) ಆಯೋಗದ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಅದಕ್ಕಾಗಿ 45 ಕೋಟಿ ರೂ.ಗಳ ಟೆಂಡರ್ ನೀಡಲಾಗಿದೆ ಎಂದು ಮಾಧ್ಯಮಗಳಿಗೆ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ. ಆದರೆ, ಅಸಲಿಗೆ ಆಯೋಗದ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿಲ್ಲ ಮತ್ತು ಆಯೋಗದ ಗಮನಕ್ಕೂ ಬಂದಿಲ್ಲ ಎಂದು ಅಧ್ಯಕ್ಷರು ತಿಳಿಸಿದ್ದಾರೆ.
ದೆಹಲಿ ಮೂಲದ ಎಕ್ಷೆರ್ಜಿ ಸಲ್ಯೂಷನ್ಸ್ ಸಂಸ್ಥೆಯು ಆ.23ರಂದು ಟೆಂಡರ್ ಬಗ್ಗೆ ಕೆಲವು ಆಕ್ಷೇಪಣೆಗಳನ್ನು ಸಲ್ಲಿಸಿದಾಗಷ್ಟೇ ಆಯೋಗಕ್ಕೆ ಟೆಂಡರ್ ಆಹ್ವಾನಿಸಿರುವ ವಿಷಯ ಗೊತ್ತಾಗಿದೆ. ಇದು ಕಾರ್ಯದರ್ಶಿಯ ಏಕಪಕ್ಷೀಯ ನಿರ್ಧಾರವಾಗಿದೆ. ಸಭೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ.
ಈ ಹಿಂದೆಯೂ 2 ಬಾರಿ ಟೆಂಡರ್ ಆಹ್ವಾನಿಸಿರುವುದು ಆ.28ರ ಟಿಪ್ಪಣಿಯಿಂದ ತಿಳಿದು ಬಂದಿದೆ. ಈ ವಿಷಯಗಳನ್ನು ಆಯೋಗದ ಗಮನಕ್ಕೆ ತಾರದೇ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಮುಂದಿನ ಸೂಚನೆ ವರೆಗೂ ಟೆಂಡರ್ ಅನ್ನು ತಡೆಹಿಡಿಯಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
