ತುಮಕೂರು:ರಾಮನವಮಿಯಂದು ಹಂಚಲಾದ ಮಜ್ಜಿಗೆ-ಪಾನಕ ಸೇವಿಸಿ 45ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ತುಮಕುರು ಜಿಲ್ಲೆ ಕುಣಿಗಲ್​ ತಾಲ್ಲೂಕಿನ ಮಂಗಳ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಕುಣಿಗಲ್​ ತಾಲ್ಲೂಕಿನ ಅಮೃತೂರು ಹೋಬಳಿಯಲ್ಲಿ ಕೊಡವತ್ತಿ ಗ್ರಾಮ ಸಮೀಪದ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಬುಧವಾರ (ಏಪ್ರಿಲ್ 17) ರಾಮನವಮಿ ಪ್ರಯುಕ್ತ ಮಜ್ಜಿಗೆ, ಪಾನಕ ವಿತರಣೆ ಮಾಡಲಾಗಿತ್ತು. ಪಾನಕ-ಮಜ್ಜಿಗೆ ಸೇವಿಸಿದ ಕೆಲ ಹೊತ್ತಿನಲ್ಲಿ ವಾಂತಿ-ಭೇದಿ ಶುರುವಾಗಿದೆ. ಕೂಡಲೇ ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ದೋಷಪೂರಿತ ಪಾನಕ-ಮಜ್ಜಿಗೆ ಸೇವನೆ ಆರೋಗ್ಯ ಹದಗೆಡಲು ಮುಖ್ಯ ಕಾರಣ ಎಂದು ತಿಳಿದು ಬಂದಿದೆ. ಚಿಕಿತ್ಸೆ ಮುಂದುವರೆಸಲಾಗಿದ್ದು, ರೋಗಿಗಳು ಶೀಘ್ರ ಗುಣಮುಖರಾಗಲಿದ್ದಾರ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 13 =
Remember me
