ಬೆಳಗಾವಿ:ಲೋಕಸಭೆ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜ್ಯದಲ್ಲಿ ಎರಡನೇ ಹಂತದ ಮತದಾನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಇದೀಗ ಮಹತ್ವದ ಬೆಳವಣಿಗೆ ಒಂದರಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಮೃಣಾಲ್​ ಹೆಬ್ಬಾಳ್ಕರ್​ ಪರ ಹಣ ಹಂಚುತ್ತಿದ್ದ ಐವರನ್ನು ಬಿಜೆಪಿ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಘಟನೆಯು ಬೆಳಗಾವಿ ಜಿಲ್ಲೆ ಗೋಕಾಕ್​ ವಿಧಾನಸಭಾ ಕ್ಷೇತ್ರದ ಅಂಕಲಗಿ ಗ್ರಾಮದಲ್ಲಿ ನಡೆದಿದ್ದು, ಬಂಧಿತರಿಂದ 20 ಲಕ್ಷ ರೂಪಾಯಿ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಂಕಲಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತರನ್ನು 2023ರ ಕಾಂಗ್ರೆಸ್​ ಪರಾಜಿತ ಅಭ್ಯರ್ಥಿ ಡಾ.ಮಹಾಂತೇಶ್ ಕಡಾಡಿ, ಭದ್ರಾವತಿ ಮೂಲದ ಇಬ್ಬರು ಯುವಕರು ಹಾಗೂ ಹರ್ಷಾ ಶುಗರ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಎಂದು ಗುರುತಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಅಂಕಲಗಿ ಗ್ರಾಮದಲ್ಲಿ ಹಣ ಹಂಚುತ್ತಿರುವ ಬಗ್ಗೆ ನಮಗೆ ಬಿಜೆಪಿ ಕಾರ್ಯಕರ್ತರು ಕರೆ ಮಾಡಿ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ತೆರಳಿ ಐವರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಇಬ್ಬರು ಕಾಂಗ್ರೆಸ್​ ಅಭ್ಯರ್ಥಿ ಪರ ಹಣ ಹಂಚಲು ಬಂದಿದ್ದಾಗಿ ಒಪ್ಪಿಕೊಂಡಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × three =
Remember me
