ಹುಬ್ಬಳ್ಳಿ:ಹುಬ್ಬಳ್ಳಿಯ ಗೋಕುಲ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಒಂದೇ ದಿನ ಐವರು ಕೋವಿಡ್ ಸೋಂಕಿತರು ನಿಧನರಾಗಿದ್ದಾರೆ.
ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಐವರು ಸೋಂಕಿತರು ಮಧ್ಯಾಹ್ನ 3.45 ರಿಂದ 5 ಗಂಟೆಯೊಳಗೆ ನಿಧನ ಹೊಂದಿದ್ದಾರೆ.
ಸಾವಿಗೆ ಆಕ್ಸಿಜನ್ ಸಮಸ್ಯೆ ಕಾರಣ ಎಂಬುದು ಮೃತರ ಕುಟುಂಬದವರ ಆರೋಪ. ಆದರೆ, ಇದನ್ನು ನಿರಾಕರಿಸಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಯಶವಂತ ಮದೀನಕರ, ಮೃತರಲ್ಲಿ ಕೆಲವರು ತೀವ್ರತರವಾದ ರೋಗಗಳಿಂದ ನರಳುತ್ತಿದ್ದರು. ಕೆಲವರಿಗೆ ವಯಸ್ಸಾಗಿತ್ತು. ಹೀಗಾಗಿ ಸಾವಿಗೀಡಾಗಿದ್ದಾರೆ. ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ ಎಂದರು.
ಆದರೂ ಮತ್ತೊಮ್ಮೆ ಸಾವಿನ ಸ್ಪಷ್ಟ ಕಾರಣದ ತನಿಖೆಗಾಗಿ ತಜ್ಞರ ಸಮಿತಿಯೊಂದನ್ನು ಎರಡು ದಿನಗಳವೊಳಗಾಗಿ ರಚಿಸಲಾಗುವುದು ಎಂದರು.
ಕರ್ನಾಟಕದಲ್ಲಿ ಕರೊನಾ ನಿರ್ವಹಣೆ ಸರ್ಕಾರದ ಕೈ ಮೀರಿದೆ, ತುರ್ತು ಮಧ್ಯ ಪ್ರವೇಶ ಮಾಡಬೇಕು ಎಂದು ಪ್ರಧಾನಿ ಮೋದಿಗೆ ಪತ್ರ ಬರೆದ ಎಚ್​ಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 5 =
Remember me
