ಶಿವಮೊಗ್ಗ: ರಾಜ್ಯದ ಎಲ್ಲ ಗ್ರಾಪಂ ಸದಸ್ಯರಿಗೆ ಪಕ್ಷಾತೀತವಾಗಿ ಜ.19ರಿಂದ ಮಾ. 26 ರವರೆಗೆ ತಾಲೂಕುವಾರು ತರಬೇತಿ ಆಯೋಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ತರಬೇತಿಗಾಗಿ 900 ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಲಾಗಿದೆ. ರಾಜ್ಯದ 5,762 ಗ್ರಾಪಂಗಳ 92, 131 ಸದಸ್ಯರು ತರಬೇತಿಯಲ್ಲಿ ಪಾಲ್ಗೊಳ್ಳಲಿದ್ದು 285 ತರಬೇತಿ ಕೇಂದ್ರಗಳ ಮುಖಾಂತರ ತಾಲೂಕು ಹಂತದಲ್ಲಿ ಹತ್ತು ತಂಡಗಳಲ್ಲಿ ತರಬೇತಿ ನೀಡಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ತರಬೇತಿ ಬೆಳಗ್ಗೆ 10.30 ರಿಂದ ಸಂಜೆ 4ರವರೆಗೆ 15 ವಿವಿಧ ವಿಷಯಾಧಾರಿತ ಅಧಿವೇಶನಗಳ ಮಾಹಿತಿ ಮತ್ತು ಕೌಶಲ್ಯಾಧಾರಿತ ವಿಚಾರಗಳನ್ನು ನೀಡಲಾಗುತ್ತದೆ. ಪ್ರತಿ ಅಧಿವೇಶನದಲ್ಲಿ ವಿಡಿಯೋ ಮೂಲಕ ವಿಷಯ ತಜ್ಞರಿಂದ ಮಾಹಿತಿ ನೀಡಲಾಗುವುದು. ಸ್ಥಳೀಯವಾಗಿ ಸಂಪನ್ಮೂಲ ವ್ಯಕ್ತಿಗಳ ಸುಗಮಗಾರಿಕೆಯೊಂದಿಗೆ ಗುಂಪು ಚರ್ಚೆ ಮತ್ತು ಚಟುವಟಿಕೆಗಳನ್ನು ನಿರ್ವಹಿಸಲಾಗುವುದು ಎಂದು ಹೇಳಿದರು.
ಮುಂದಿನ ಐದು ವರ್ಷದಲ್ಲಿ ನೂತನ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ಜನಸ್ನೇಹಿ ಕಾರ್ಯಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಪರಿಣಾಮಕಾರಿ ಸ್ವಯಂ ಆಡಳಿತ ಘಟಕಗಳಾಗಿ ಹೊರಹೊಮ್ಮಲು ಪ್ರೇರೇಪಿಸಿದೆ. ತನ್ಮೂಲಕ ಸ್ಥಳೀಯ ಅಭಿವೃದ್ಧಿ ಹರಿಕಾರರಾಗಿ ಗ್ರಾಮೀಣಾಭಿವೃದ್ಧಿಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖತಾಗುವಂತೆ ಸಜ್ಜುಗೊಳಿಸಲಾಗುವುದು ಎಂದರು.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − eleven =
Remember me
