ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯಂತೆ 5 ಲಕ್ಷ ಆ್ಯಂಟಿಜನ್‌ (ಪ್ರತಿಜನಕ) ಕಿಟ್​ ಖರೀದಿಸಲು ನಿರ್ಧರಿಸಲಾಗಿದೆ‌ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.
ವಿಧಾನಸೌಧದಲ್ಲಿ ಟಾಸ್ಕ್ ಫೋರ್ಸ್‌ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‌ ಆ್ಯಂಟಿಜನ್ ಟೆಸ್ಟ್ ಕಿಟ್ ಬಳಕೆಯಿಂದ ಅರ್ಧ ತಾಸಿನಲ್ಲಿ ವರದಿ ಪಡೆಯಬಹುದು. ಹೀಗಾಗಿ ಸೋಂಕು ಹೆಚ್ಚುತ್ತಿರುವ ರಾಜಧಾನಿಯಲ್ಲಿ ಹೆಚ್ಚಿನ ಪ್ರಮಾಣದ ಕಿಟ್​ಗಳನ್ನು ಬಳಸಲಾಗುತ್ತದೆ ಎಂದರು.
ಇದನ್ನೂ ಓದಿರಿಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ, ಚಿಕಿತ್ಸೆ ಸಿಗದೆ 7 ತಿಂಗಳ ಮಗು ಸಾವು
ಹೊಸದಾಗಿ ಖರೀದಿಸಲಿರುವ ಆ್ಯಂಟಿಜನ್ ಟೆಸ್ಟ್ ಕಿಟ್​ಗಳ ಪೈಕಿ ಅರ್ಧದಷ್ಟನ್ನು ಬೆಂಗಳೂರಿನಲ್ಲೇ ಬಳಸಿಕೊಳ್ಳಲಾಗುವುದು. ಬೆಂಗಳೂರಿನಲ್ಲಿ ಸೋಂಕು ನಿಯಂತ್ರಣ ಹಾಗೂ ಮರಣ ಪ್ರಮಾಣ ತಗ್ಗಿಸುವುದಕ್ಕಾಗಿ 50 ವರ್ಷ ಮೇಲ್ಪಟ್ಟವರ ತಪಾಸಣೆ ನಡೆಸಲಿದ್ದು, ಒಟ್ಟು ಜನಸಂಖ್ಯೆಯಲ್ಲಿ ಶೇ.50 ಜನರ ತಪಾಸಣೆ ನಡೆಸುವ ಚಿಂತನೆಯಿದೆ ಎಂದು ಸಚಿವರು ತಿಳಿಸಿದರು.
ಲಿಖಿತ ಒಪ್ಪಿಗೆ:ಸರ್ಕಾರಕ್ಕೆ ಶೇ.50 ಹಾಸಿಗೆಗಳನ್ನು ಹಸ್ತಾಂತರಿಸುವ ಕುರಿತು ಖಾಸಗಿ ಆಸ್ಪತ್ರೆಯವರು ಲಿಖಿತ ಒಪ್ಪಿಗೆ ಪತ್ರ ಸಲ್ಲಿಸಿದ್ದು, ಸೋಂಕಿತರ ಚಿಕಿತ್ಸೆಗೆ ಸಮಸ್ಯೆ ಆಗುವುದಿಲ್ಲ ಎಂದು ಸಚಿವ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.
‘ಅಪ್ಪ.. ಯಾವ ಕಾಲೇಜಿಗೆ ಸೇರಿಸುತ್ತಿದ್ದೆ?’ ಎಂದ ಮಗ ಬಾರದ ಲೋಕಕ್ಕೆ ಸೇರಿಯೇಬಿಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
