ಬೆಂಗಳೂರು:ಇತ್ತೀಚೆಗಿನ ಅತಿವೃಷ್ಟಿಯಲ್ಲಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಕಂದಾಯ ಇಲಾಖೆ ಪ್ರಕಟಿಸಿದೆ. ಎನ್​ಡಿಆರ್​ಎಫ್, ಎಸ್​ಡಿಆರ್​ಎಫ್ ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಿದರೆ ಪೂರ್ಣ ಮನೆ ಕಳೆದುಕೊಂಡವರಿಗೆ 1 ಲಕ್ಷ ರೂ. ನೀಡಲು ಸಾಧ್ಯವಿಲ್ಲ. ಈ ಕಾರಣಕ್ಕೆ ರಾಜ್ಯ ಸರ್ಕಾರ ಹೆಚ್ಚುವರಿ ಪರಿಹಾರ ಘೋಷಿಸಿದೆ.
2020 ಆಗಸ್ಟ್​ನಿಂದ ಸೆಪ್ಟೆಂಬರ್​ವರೆಗೆ ಪ್ರವಾಹದಿಂದ ಬಾಧಿತವಾದ ಸಮಸ್ಯಾತ್ಮಕ ಗ್ರಾಮಗಳ ಸಂತ್ರಸ್ಥರ ಬಟ್ಟೆ-ಬರೆ ಹಾಗೂ ದಿನಬಳಕೆ ವಸ್ತುಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ, ಪ್ರತಿ ಕುಟುಂಬಕ್ಕೆ 3,800 ರೂ. ಜತೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ 6,200 ರೂ. ಸೇರಿಸಿ 10 ಸಾವಿರ ರೂ. ನೀಡಲು ನಿರ್ಧರಿಸಲಾಗಿದೆ. ಹಾಗೆಯೇ ಪ್ರವಾಹದಿಂದ ಸಂಪೂರ್ಣ ಅಥವಾ ತೀವ್ರ ಹಾನಿಗೊಳಗಾದ ಮನೆಗಳ ಮರುನಿರ್ವಣ/ದುರಸ್ತಿಗಾಗಿ ಹೆಚ್ಚುವರಿ ಪರಿಹಾರ ನೀಡುವ ಸಂಬಂಧ ‘ಸೇರ್ಪಡೆ ಆದೇಶ’ ಪ್ರಕಟಿಸಿದೆ.
ಇದನ್ನೂ ಓದಿ:ಪಟಾಕಿ ಚೀಲದ ಮೇಲೇರಿದ ಜೀಪ್ ಬಾನೆತ್ತರ ಚಿಮ್ಮಿದ್ದರಿಂದ ಆರು ಜನಕ್ಕೆ ಗಾಯ
ಪೂರ್ಣ ಅಥವಾ ಶೇ.75ಕ್ಕಿಂತ ಹೆಚ್ಚು ಹಾನಿಯಾದ ಮನೆಗೆ 5 ಲಕ್ಷ ರೂ., ಶೇ.25ರಿಂದ ಶೇ.75 ಹಾನಿಯ ಮನೆ ಕೆಡವಿ ಹೊಸದಾಗಿ ನಿರ್ವಿುಸಲೂ 5 ಲಕ್ಷ ರೂ., ಶೇ.25ರಿಂದ ಶೇ.75 ವರೆಗಿನ ಹಾನಿಗೆ 3 ಲಕ್ಷ ರೂ., ಶೇ.15ರಿಂದ ಶೇ.25 ಹಾನಿಗೆ 50 ಸಾವಿರ ರೂ. ನೀಡಲಾಗುತ್ತದೆ. ಪ್ರಸ್ತುತ ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ಅಕ್ಟೋಬರ್​ನಲ್ಲೂ ನೆರೆ ಹಾವಳಿಯಿಂದ ಹಾನಿಗೀಡಾದ ಮನೆಗಳ ಮರುನಿರ್ವಣ ಅಥವಾ ದುರಸ್ತಿ ಕಾರ್ಯ, ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರ ಪರಿಹಾರ ಕಾರ್ಯಗಳಿಗೆ ಆಗಸ್ಟ್​ನಲ್ಲಿ ಹೊರಡಿಸಿದ ಆದೇಶವನ್ನು ಮುಂದುವರಿಸಲು ಸರ್ಕಾರ ಮಂಜೂರಾತಿ ನೀಡಿದೆ.
ಆಂಧ್ರಪ್ರದೇಶದಲ್ಲಿ ನವೆಂಬರ್ 2 ರಿಂದಲೇ ಶಾಲೆ ಶುರು ಮಾಡ್ತಾರಂತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
