ಬೆಂಗಳೂರು:ಯಶ್ ಬರ್ತ್​ಡೇ ಪ್ರಯುಕ್ತ ಫ್ಲೆಕ್ಸ್ ಕಟ್ಟಲು ಹೋದ ಮೂವರು ಯುವಕರು ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದರು. ರಾಕಿಂಗ್ ಸ್ಟಾರ್ ಅಭಿಮಾನಿಗಳ ಸಾವಿನ ನಂತರ ಸಂತ್ರಸ್ತ ಕುಟುಂಬಕ್ಕೆ ನೆರವಾಗುತ್ತೇನೆಂದು ಮಾತುಕೊಟ್ಟಿದ್ದರು. ಅದರಂತೆ ಇದೀಗ ಮೃತ ಅಭಿಮಾನಿಗಳ ಕುಟುಂಬಕ್ಕೆ ಹಣ ಸಹಾಯವನ್ನು ಮಾಡಿದ್ದಾರೆ.
ಯಶ್​ ಜನ್ಮದಿನದ ಹಿನ್ನಲೆಯಲ್ಲಿ ಬ್ಯಾನರ್​ ಕಟ್ಟುವಾಗ ವಿದ್ಯುತ್​ ತಂತಿ ಸ್ಪರ್ಶಿಸಿ ಅಭಿಮಾನಿಗಳು ನಿಧನರಾದ ನೋವು ಇನ್ನೂ ಹಸಿಯಾಗಿದೆ. ಮೃತ ಅಭಿಮಾನಿಗಳಾದ ಮುರಳಿ, ನವೀನ್​ ಮತ್ತು ಹನುಮಂತ ಅವರ ಕುಟುಂಬದವರಿಗೆ ಪರಿಹಾರ ಹಣ ತಲುಪಿಸಲಾಗಿದೆ.
ಯಶ್​ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಪರಿಹಾರದ ಚೆಕ್​ ನೀಡಿದ್ದಾರೆ. ಪ್ರತಿ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಚೆಕ್​ ನೀಡಲಾಗಿದೆ. ಯಶ್ ಸ್ನೇಹಿತರು ಜನವರಿ 17ರಂದು ಬೆಳಗ್ಗೆ 10 ಗಂಟೆಗೆ ಕುಟುಂಬದವರನ್ನ ಭೇಟಿ ಮಾಡಿದ್ದಾರೆ.​ ಸ್ನೇಹಿತರು ಬಂದು ಪರಿಹಾರ ಹಣ ನೀಡಿದ್ದಾಗ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಮಕ್ಕಳನ್ನು ಕಳೆದುಕೊಂಡ ನೋವು ಪೋಷಕರನ್ನು ಕಾಡುತ್ತಿದೆ.
ತಣ್ಣೀರು/ ಬಿಸಿನೀರು..ಚಳಿಗಾಲದಲ್ಲಿ ತಣ್ಣೀರಿನ ಸ್ನಾನ ಆರೋಗ್ಯಕ್ಕೆ ಒಳ್ಳೆಯದು


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 3 =
Remember me
