ಬೆಂಗಳೂರು:ಇತ್ತೀಚೆಗೆ ಮೃತಪಟ್ಟಿದ್ದ ಹಾವೇರಿ ಜಿಲ್ಲೆಯ ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ಗಂಗಾಧರ ಹೂಗಾರ ಮತ್ತು ನ್ಯೂಸ್1 ಕ್ಯಾಮರಾಮೆನ್ ಸೆಲ್ವರಾಜು (ಚಾಮರಾಜನಗರ) ಅವರ ಕುಟುಂಬಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಮನವಿ ಮೇರೆಗೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.
ಸಂಕಷ್ಟದಲ್ಲಿರುವ ಗಂಗಾಧರ ಹೂಗಾರ ಕುಟುಂಬಕ್ಕೆ ನೆರವು ನೀಡುವಂತೆ ಹಾವೇರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಸೆಲ್ವರಾಜು ಅವರ ಕುಟುಂಬಕ್ಕೆ ನೆರವು ನೀಡುವಂತೆ ಚಾಮರಾಜನಗರ ಜಿಲ್ಲಾ ಕಾರ್ಯ ನಿರತ ಸಂಘವು, ರಾಜ್ಯ ಸಂಘಕ್ಕೆ ಪತ್ರ ಬರೆದಿದ್ದವು.
ಈ ಬಗ್ಗೆ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಮಾಡಿ, ಪರಿಹಾರ ಮಂಜೂರು ಮಾಡಿಸಿದ್ದಾರೆ. ಸಂಕಷ್ಟದಲ್ಲಿದ್ದ ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ಮಂಜೂರು ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೆಯುಡಬ್ಲ್ಯೂಜೆ ಕೃತಜ್ಞತೆ ಸಲ್ಲಿಸಿದೆ.
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

VIDEO| ಪೌರ ಕಾರ್ಮಿಕರೇ ನಿಜವಾದ ದೇವರು! ಬ್ಯೂಟಿ ಪಾರ್ಲರ್​ನಲ್ಲಿ ಪೌರ ಕಾರ್ಮಿಕರಿಗೆ ಸಿಕ್ಕ ಗೌರವ ನೋಡಿ…

ಸ್ನೇಹಿತರನ್ನು ಉಳಿಸಿ ಪ್ರಾಣ ಬಿಟ್ಟಿದ್ದ ಬಾಲಕನಿಗೆ ಮರಣೋತ್ತರ ಹೊಯ್ಸಳ ಶೌರ್ಯ ಪ್ರಶಸ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 3 =
Remember me
