ಬೆಂಗಳೂರು:ರಾಜ್ಯದಲ್ಲಿ ವಿದ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಐವರು ಶಂಕಿತ ಉಗ್ರರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.ಇದನ್ನೂ ಓದಿ:ಪಾಕಿಸ್ತಾನದ ವೈರಲ್ ಚಾಯ್‍ವಾಲಾ ಈಗ ಲಂಡನ್‍ನಲ್ಲಿ ಮಾಡೋ ಕೆಲಸ ಏನು?ಈ ಮೂಲಕ ಪೊಲೀಸರು ದೊಡ್ಡ ಭಯೋತ್ಪಾದಕ ಸಂಚನ್ನು ತಪ್ಪಿಸಿದ್ದು, ಸೈಯದ್ ಸುಹೇಲ್, ಉಮರ್, ಜುನೈದ್, ಮುದಾಸಿರ್ ಮತ್ತು ಜಾಹಿದ್ ಎಂಬುವವರನ್ನು ಬಂಧಿಸಿದ್ದಾರೆ. ಈ ಆರೋಪಿಗಳಿಂದ ಸ್ಪೋಟಕ ವಸ್ತುಗಳು, 4 ವಾಕಿಟಾಕಿ, 7 ಕಂಟ್ರಿ ಮೇಡ್ ಪಿಸ್ತೂಲ್, 42 ಸಜೀವ ಗುಂಡುಗಳು, ಮದ್ದುಗುಂಡು, 2 ಡ್ರ್ಯಾಗರ್, 2 ಸೆಟಲೈಟ್ ಫೋನ್ ಹಾಗೂ 4 ಗ್ರೆನೈಡ್​​ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ.ಈ ಆರೋಪಿಗಳು 2017ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಜೈಲು ಶಿಕ್ಷೆಯನ್ನು ಎದುರಿಸುತ್ತಿದ್ದ ವೇಳೆ ಜಮಾತ್-ಎ-ಇಸ್ಲಾಮಿಗೆ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ. ಜೈಲಿನಲ್ಲಿ ತಾವೂ ಸಂಘಟನೆ ಸೇರುವುದರ ಬಗ್ಗೆ ಮಾತುಕತೆ ನಡೆಸಿದ್ದರು ಎನ್ನಲಾಗಿದ್ದು, ತಾವು ಎಲ್ಲದಕ್ಕೂ ರೆಡಿ ಎಂದು ಉಗ್ರರಿಗೆ ಹೇಳಿದ್ದರು.ಇದನ್ನೂ ಓದಿ:I.N.D.I.A ಆಗಿ ಬದಲಾದ UPA; ಕಾನೂನು ಪ್ರಕಾರ ಸರಿಯೇ? ಮಾಜಿ ಕಾನೂನು ಸಚಿವರು ಹೇಳಿದ್ದಿಷ್ಟು…ಈ ಬೆನ್ನಲ್ಲೇ ವಿದ್ವಂಸಕ ಕೃತ್ಯದ ಬಗ್ಗೆ ಜಮತ್ ಇ ಇಸ್ಲಾಮಿ ಸಂಘಟನೆಯ ಹ್ಯಾಂಡ್ಲರ್ಸ್ ಮೂಲಕ ಟ್ರೈನಿಂಗ್​​ ನೀಡುವುದರ ಜತೆಗೆ ಸುಲ್ತಾನ್ ಪಾಳ್ಯದಲ್ಲಿ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ಸುಲ್ತಾನ್ ಪಾಳ್ಯದ ಮಸೀದಿಯೊಂದರ ಪಕ್ಕದಲ್ಲೆ ವಾಸವಿದ್ದ ಶಂಕಿತರು, ವಿದ್ವಂಸಕ ಕೃತ್ಯ ನಡೆಸಬೇಕಾದ ಬಗ್ಗೆ ಪ್ಲಾನಿಂಗ್ ಮಾಡುತ್ತಿದ್ದರು.ಟಾರ್ಗೆಟ್ ಬೆಂಗಳೂರು:ಬೆಂಗಳೂರು ಸಿಟಿಯನ್ನು ಟಾರ್ಗೆಟ್ ಮಾಡಿದ್ದ ಶಂಕಿತ ಉಗ್ರರು, ವಿದ್ವಂಸಕ ಕೃತ್ಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದಿದ್ದರು. ಅಲ್ಲದೇ. ಬೆಂಗಳೂರಿನಲ್ಲಿ ಎಲ್ಲೆಲ್ಲಿ, ಏನು, ಹೇಗೆಲ್ಲಾ ಸ್ಫೋಟಿಸಬೇಕು ಎನ್ನುವುದರ ಬಗ್ಗೆ ಟ್ರೈನಿಂಗ್ ಪಡೆದಿದ್ದ ಶಂಕಿತರು, ಸುಮಾರು ಹತ್ತು ಕಡೆ ಬ್ಲಾಸ್ಟಿಂಗ್​​ಗೆ ಪ್ಲಾನ್ ಮಾಡಿದ್ದರು. ಎಲ್ಲಾ ಕಡೆಯೂ ಆ್ಯಕ್ಟೀವ್ ಆಗಿದ್ದ ಶಂಕಿತರ ಟೀಂ, ಎಲ್ಲಾ ಪ್ಲಾನ್ ಮಾಡಿಕೊಂಡು ಅದನ್ನು ಕಾರ್ಯಗತಗೊಳಿಸಲು ಕಾಯುತ್ತಿದ್ದರು ಎಂದು ಹೇಳಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 1 =
Remember me
